Header Ads
Breaking News

ಅನಿಲ ಟ್ಯಾಂಕರ್ ಮತ್ತು ಕಂಟೈನರ್ ಪರಸ್ಪರ ಢಿಕ್ಕಿ : ತಪ್ಪಿದ ಅನಾಹುತ

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಖಾಲಿಯಾಗಿರುವ ಅನಿಲ ಟ್ಯಾಂಕರ್ ಮತ್ತು ಕಂಟೈನರ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ಮತ್ತು ಬೆಂಗಳೂರು ಕಡೆ ಹೋಗುತ್ತಿದ್ದ ಕಂಟೈನರ್ ನಡುವೆ ಅಪಘಾತ ಸಂಭವಿಸಿದೆ. ಆದರೆ ಗ್ಯಾಸ್ ಟ್ಯಾಂಕರ್ ಖಾಲಿ ಇದ್ದ ಕಾರಣ ಯಾವುದೇ ಅಪಾಯ ಎದುರಾಗಿಲ್ಲ. ಕಲ್ಲಡ್ಕ ಪೂರ್ಲಿಪ್ಪಾಡಿಯಲಿ ನಿನ್ನೆ ರಾತ್ರಿ ಸುಮಾರು 9 ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಯಾರಿಗೂ ಗಾಯಗಳುಂಟಾಗಿಲ್ಲ ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಎಸ್.ಐ. ರಾಜೇಶ್ ಕೆ.ವಿ. ಮತ್ತು ಸಿಬ್ಬಂದಿ ಆಗಮಿಸಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.

Related posts

Leave a Reply

Your email address will not be published. Required fields are marked *