
ಕೋವಿಡ್ ಲಸಿಕೆ ಕೋವಿಶೀಲ್ಡ್ವನ್ನು ಆರೋಗ್ಯ ಕಾರ್ಯಕರ್ತರಿಗೆ ನೀಡುವ ಕಾರ್ಯವನ್ನು ಇನ್ನೆರಡು ದಿನಗಳ ಕಾಲ ಮುಂದುವರಿಸಲಾಗಿದೆ. ಅದರೊಳಗೆ ಅವರು ಅವರು ಬಂದು ಸ್ವೀಕಾರ ಮಾಡಬಹುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಗೋಷ್ಟಿಯಲ್ಲಿ ಮಾತನಾಡಿದ ಅವರು, ಈಗಾಗಲೇ 52 ಸಾವಿರ ನೋಂದಣಿ ಮಾಡಿಕೊಂಡಿದ್ದಾರೆ. 28,150 ಮಂದಿ ಪಡೆದುಕೊಂಡಿದ್ದಾರೆ. ಇನ್ನು ಹೆಚ್ಚು ಕಡಿಮೆ 15 ಸಾವಿರದಷ್ಟು ಮಂದಿ ಪಡೆಯಲು ಬಾಕಿಯಿದೆ. ಬೆಂಗಳೂರು ಬಿಟ್ಟರೆ ಮಂಗಳೂರು ನಂತರದ ಸ್ಥಾನದಲ್ಲಿದೆ. ಈಗಾಗಲೇ ಎರಡನೇ ಹಂತದ ಲಸಿಕೆಯಲ್ಲಿ 8507ರಲ್ಲಿ 3 ಸಾವಿರದಷ್ಟು ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ಉಳಿದವರು ಕೂಡ ಅದಷ್ಟು ಬೇಗನೆ ಉಚಿತವಾಗಿ ಪಡೆದುಕೊಳ್ಳಬಹುದು. ಈ ಕುರಿತು ಈಗಾಗಲೇ ಲಸಿಕೆ ಅಭಿಯಾನವನ್ನು ಮತ್ತಷ್ಟು ಚುರುಕು ಮಾಡುವ ಯೋಜನೆ ಇಟ್ಟುಕೊಳ್ಳಲಾಗಿದೆ ಎಂದರು.