Header Ads
Breaking News

“ಆಳ್ವಾಸ್ ವನಸಿರಿ” ಮಾಹಿತಿ ಕಾರ್ಯಾಗಾರ

ಮೂಡುಬಿದಿರೆ : ಆಳ್ವಾಸ್ ಸಾಂಪ್ರಾದಾಯಿಕ ಔಷಧಿ ಸಂಶೋಧನ ಕೇಂದ್ರದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಔಷಧೀಯ ಸಸ್ಯ ಪಾಧಿಕಾರದ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮುಂಚೂಣಿಯ ಅರಣ್ಯ ಸಿಬ್ಬಂದಿಗಳಿಗೆ ಔಷಧಿಯ ಸಸ್ಯಗಳ ಕುರಿತ ಒಂದು ದಿನದ ಮಾಹಿತಿ ಕಾರ್ಯಾಗಾರ “ಆಳ್ವಾಸ್ ವನಸಿರಿ” ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು.

ಹೆಚ್ಚುವರಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ, ರಾಜ್ಯ ಔಷಧೀಯ ಸಸ್ಯಗಳ ಪಾಧಿಕಾರದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುದರ್ಶನ್ ಜಿ.ಎ. ಕಾರ್ಯಾಗಾರವನ್ನು ಉದ್ಘಾಟಿಸಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಈ ದೇಶವನ್ನು ಗಮನಿಸಿದರೆ ಕರ್ನಾಟಕವು ಪ್ರಫುಲ್ಲವಾದ ಜಾಗವಾಗಿದ್ದು ಸುಮಾರು 300ರಷ್ಟು ಗಿಡಮೂಲಿಕೆಗಳ ಯೋಗ್ಯವಾದ ಭೂಮಿ. ಕೇರಳ ಮತ್ತು ಕರ್ನಾಟಕ ಬಹಳ ಪ್ರಮುಖವಾಗಿ ಔಷಧಿಯ ಸಸ್ಯಗಳಿರುವ ಜಾಗವಿದು ಇಲ್ಲನ ಸರಕಾರ, ಸಂಬಂಧಪಟ್ಟ ಇಲಾಖೆಗಳು ಇದನ್ನು ಪರಿಣಾಮಕಾರಿಯಾಗಿ ಬಳಸಿದರೆ ಬಹಳ ದೊಡ್ಡ ಕ್ರಾಂತಿ ಕರ್ನಾಟಕದಲ್ಲಿ ಆಗಬಹುದು ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕುಂದಾಪುರ ವಲಯದ ಉಪಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಭಾಗವಹಿಸಿದ್ದರು. ಈ ಸಂದರ್ಭ ಕುದುರೆಮುಖ ವಲಯದ ಉಪಸಂರಕ್ಷಣಾಧಿಕಾರಿ ರುದ್ರನ್, ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಸಜಿತ್ ಎಂ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *