
ಎಸ್ಡಿಪಿಐ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮತ್ತು ಮಹಿಳಾ ಮೋರ್ಚಾದ ವತಿಯಿಂದ ನಗರದ ಕ್ಲಾಕ್ ಟವರ್ ಎದುರು ಪ್ರತಿಭಟನೆ ನಡೆಸಿದರು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರತಿಭಟನಾಕಾರರು ನಿಮ್ಮ ಸಂಘಟನೆಗೆ ದ್ವೇಷವನ್ನಲ್ಲ ಪ್ರೀತಿಯನ್ನು ಕಲಿಸಿಕೊಡಿ. ಅದನ್ನು ಬಿಟ್ಟು ಪಾಕಿಸ್ತಾರ ಪರ ಘೋಷಣೆ ಕೂಗುವುದಲ್ಲ.ಈ ಘಟನೆಯನ್ನು ಬಿಜೆಪಿ ಯುವ ಮೋರ್ಚಾ ಮತ್ತು ಮಹಿಳಾ ಮೊರ್ಚಾ ಖಡಾ ಖಂಡಿತವಾಗಿ ಖಂಡಿಸುತ್ತದೆ ಎಂದು ಹೇಳಿದರು.