Header Ads
Breaking News

ಎಸ್ ಡಿ ಪಿ ಐ ಬಂಟ್ವಾಳ ಪುರಸಭಾ ಸಮಿತಿ ವತಿಯಿಂದ ಅನಿಲ ಬೆಲೆಯೇರಿಕೆಯನ್ನು ತಕ್ಷಣ ಹಿಂಪಡೆಯುವಂತೆ ಪ್ರತಿಭಟನೆ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ಪುರಸಭಾ ಸಮಿತಿ ವತಿಯಿಂದ ಅನಿಲ ಬೆಲೆಯೇರಿಕೆಯನ್ನು ತಕ್ಷಣ ಹಿಂಪಡೆಯಿರಿ ಎಂಬ ಬೇಡಿಕೆಯೊಂದಿಗೆ ಬಿಸಿ ರೋಡ್ ಕೈಕಂಬ ಜಂಕ್ಷನ್ ನಲ್ಲಿ ಓಲೆಯನ್ನು ಹಾಕಿ ಚಾ ಮಾಡಿ ಎಲ್ಲರಿಗೂ ವಿತರಿಸುವ ಮೂಲಕ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಾಯಿತ್ತು. ಈ ಸಂದರ್ಭದಲ್ಲಿ ಪ್ರತಿಭಟನೆಯ ಅಧ್ಯಕ್ಷತೆಯನ್ನು ಪುರಸಭಾ ಸಮಿತಿ ಅಧ್ಯಕ್ಷರಾದ ಮುನೀಶ್ ಅಲಿ ವಹಿಸಿದ್ದರು. ಅವರು ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಫರಂಗಿಪೇಟೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷರಾದ ಶಾಹುಲ್ ಎಸ್ ಎಚ್, ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕ, ಬಂಟ್ವಾಳ ಪುರಸಭೆ ಸದಸ್ಯರಾದ ಇದ್ರೀಸ್ ಪಿ ಜೆ, ವಿಧಾನ ಸಭಾ ಕ್ಷೇತ್ರ ಸಮಿತಿ ಸದಸ್ಯ ಅಕ್ಬರ್ ಅಲಿ, ಎಸ್‍ಡಿಟಿಯು ಜಿಲ್ಲಾ ಪ್ರದಾನ ಕಾರ್ಯದರ್ಶಿ ಮಾಲಿಕ್, ಶಫೀಕ್ ಲೊರೆಟ್ಟೊ, ಅನ್ವರ್ ಆಲಡ್ಕ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *