Header Ads
Breaking News

ಕರಾವಳಿ ಭಾಗದಲ್ಲಿ ವರುಣನ ಅಬ್ಬರ : ಉಡುಪಿಯಲ್ಲಿ 5ದಿನ ಆರೆಂಜ್ ಅಲರ್ಟ್

ಕರಾವಳಿ ಭಾಗದಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ 115 ಮಿ.ಮೀ ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಜಿಲ್ಲೆಯಲ್ಲಿ ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಜಿಲ್ಲಾ ಹಾಗೂ ತಾಲೂಕು ಸಮಟ್ಟದ ಅಧಿಕಾರಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು. ಸಾರ್ವಜನಿಕರು ನದಿ, ಸಮುದ್ರಗಳಿಗೆ ಇಳಿಯಬಾರದು ಎಂದು ಪ್ರಾಧಿಕಾರ ಸೂಚನೆ ನೀಡಿದೆ.

Related posts

Leave a Reply

Your email address will not be published. Required fields are marked *