Header Ads
Header Ads
Breaking News

ಕೇಂದ್ರದ ಮಾಜಿ ಸಚಿವ ಧನಂಜಯ್ ಕುಮಾರ್ ನಿಧನ

ಕೇಂದ್ರದ ಮಾಜಿ ಸಚಿವ ವಿ. ಧನಂಜಯ ಕುಮಾರ್ ಇಂದು ಮಧ್ಯಾಹ್ನ 1.30ರ ವೇಳೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳವಾರ ಬೆಳಗ್ಗೆ 7 ಗಂಟೆಯಿಂದ 10 ರವರೆಗೆ ನಗರದ ಕದ್ರಿ ಕಂಬಳದಲ್ಲಿ ಇರುವ ಅವರ ನಿವಾಸದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ಬಳಿಕ ಅವರ ಮೃತದೇಹವನ್ನು ವೇಣೂರಿಗೆ ಕೊಂಡೊಯ್ದು ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಮೂಲಗಳು ಹೇಳಿವೆ. ಧನಂಜಯ ಕುಮಾರ್ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಮಂಗಳೂರು ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಬಿಜೆಪಿ ಸಂಸದರಾಗಿ ಚುನಾಯಿತರಾಗಿದ್ದರು.

Related posts

Leave a Reply

Your email address will not be published. Required fields are marked *