Header Ads
Header Ads
Breaking News

ಕೇಂದ್ರ ಸರ್ಕಾರದ ಬೆಲೆಯೇರಿಕೆ ನೀತಿಗೆ ಆಕ್ರೋಶ. ಬೈಂದೂರಿನಲ್ಲಿ ಕಾಂಗ್ರೆಸ್-ಜೆಡಿಎಸ್‌ನಿಂದ ಪ್ರತಿಭಟನೆ. ಕೇಂದ್ರದ ವಿರುದ್ಧ ಕಿಡಿಕಾರಿದ ಮಾಜಿ ಶಾಸಕ ಗೋಪಾಲ ಪೂಜಾರಿ.

ಪೆಟ್ರೋಲ್-ಡೀಸೆಲ್, ಗ್ಯಾಸ್ ಬೆಲೆ ಏರಿಕೆ ವಿರೋಧಿಸಿ ಕರೆ ನೀಡಲಾಗಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಬೈಂದೂರು ಬ್ಲಾಕ್ ಜೆಡಿಎಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕೇಂದ್ರದಿಂದ ತೆರಿಗೆ ಹಣ ಲೂಟಿ ಮಾಡುತ್ತಿದ್ದಾರೆ.

ಯುಪಿಎ ಸರಕಾರದಲ್ಲಿ ರೂಪಿಸಿದ್ದ ಪೆಟ್ರೋಲಿಯಂ ನೀತಿಯನ್ನು ಕೇಂದ್ರ ಸರಕಾರ ಅನುಷ್ಠಾನಗೊಳಿಸದೇ ನಿರ್ಲಕ್ಷಿಸಿರುವ ಪರಿಣಾಮ ಇಂದು ದೇಶದ ಖಜಾನೆಗೆ ಕಳೆದ ನಾಲ್ಕುವರೆ ವರ್ಷದಲ್ಲಿ 16 ಲ.ಕೋ ನಷ್ಟ ಉಂಟಾಗಿದೆ. ಕೇಂದ್ರ ಸರಕಾರ ಕೇವಲ ಪೆಟ್ರೋಲ್ ಡೀಸೆಲ್ ಮಾರಾಟದಿಂದ ಬರುವ ತೆರಿಗೆ ಹಣವನ್ನು ಲೂಟಿ ಮಾಡಿದ್ದು, ಬಿಟ್ಟರೆ ಬೆಲೆ ಹೆಚ್ಚಳವಾದಾಗ ಅದನ್ನು ತಡೆದು ಗ್ರಾಹಕರ ನೆರವಿಗೆ ಬರುವ ಕೆಲಸವನ್ನು ಮಾಡುತ್ತಿಲ್ಲ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು. 

Related posts

Leave a Reply