Header Ads
Breaking News

ಗಡಿ ಪ್ರದೇಶದಲ್ಲಿ ಅಕ್ರಮ ಮರಳು ಸಾಗಾಟ ತಡೆಗೆ ಸಿಸಿ ಕ್ಯಾಮರಾ ಅಳವಡಿಸಲು ಸೂಚಿಸಲಾಗಿದೆ : ಗಣಿ ಮತ್ತು ಭೂ ವಿಜ್ಞಾನ ಖಾತೆಯ ಸಚಿವ ಸಿ.ಸಿ.ಪಾಟೀಲ್

ಅಂತರರಾಜ್ಯ ಅಕ್ರಮ ಮರಳು ಸಾಗಾಟಕ್ಕೆ ತಡೆಗೆ ಕ್ರಮ ಕೈಗೊಳ್ಳಲಾಗುವುದು. ಗಡಿ ಪ್ರದೇಶದಲ್ಲಿ ಅಕ್ರಮ ಮರಳು ಸಾಗಾಟ ತಡೆಗೆ 196 ಸಿ.ಸಿ.ಕ್ಯಾಮರಾ ಅಳವಡಿಸಲು ಸೂಚಿಸಲಾಗಿದೆ ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಖಾತೆಯ ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು.ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳ ಟಾಸ್ಕ್‍ಪೋರ್ಸ್ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ 15ದಿನಗಳ ಒಳಗೆ ಮರಳು ತೆಗೆಯಲು ಸೂಕ್ತ ಕ್ರಮ ಕೈ ಗೊಳ್ಳಲಾಗುವುದು. ಜಿಲ್ಲೆಯಲ್ಲಿ ಗುರುತಿಸಲಾದ 30 ಬ್ಲಾಕ್ ಗಳಲ್ಲಿ ಮರಳು ತೆಗೆಯಲು ಅನುಮತಿ ನೀಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸಿಆರ್ ಝಡ್ ಪ್ರದೇಶದಲ್ಲಿ 104 ಕುಟುಂಬಗಳಿಗೆ ಮರಳು ತೆಗೆಯಲು ಅನುಮತಿ ನೀಡಲಾಗಿದೆ.ಈ ಪ್ರದೇಶದಲ್ಲಿ ಇನ್ನು ಕೆಲವರ ಅರ್ಜಿಯನ್ನು ಪರಿಗಣಿಸಲಾಗುವುದು ಎಂದು ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಉಡುಪಿ ಜಿಲ್ಲಾಧಿಕಾರಿ ಡಾ.ಜಗದೀಶ್, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *