Header Ads
Header Ads
Breaking News

ಡಿಕೆ ಶಿವಕುಮಾರ್ ಬಂಧನ ವಿಚಾರ : ಸುಳ್ಯದಲ್ಲಿ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

“ರಾಜಕೀಯ ವೈಷಮ್ಯದಿಂದಲೇ ನಮ್ಮ ನಾಯಕರಾಗಿರುವ ಡಿ.ಕೆ.ಶಿವಕುಮಾರ್‌ರನ್ನು ಬಂಧಿಸಲಾಗಿದೆ. ಕೇಂದ್ರ ಸರಕಾರದ ಹಿಟ್ಲರ್‌ಶಾಯಿ ಆಡಳಿತ ತುಂಬಾ ದಿನ ನಡೆಯುವುದಿಲ್ಲ. ಇದಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಸಿಗುತ್ತದೆ. ಎಂದು ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ಭರತ್ ಮುಂಡೋಡಿ ಹೇಳಿದರು.

ಅವರು, ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ ನಾಯಕ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಮುಖಾಂತರ ಬಂಧಿಸಿರುವುದನ್ನು ಖಂಡಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಎಂ.ವೆಂಕಪ್ಪ ಗೌಡ ಮಾತನಾಡಿ ಡಿ.ಕೆ.ಶಿವಕುಮಾರ್ ಒಕ್ಕಲಿಗ ಸಮುದಾಯದ ಹಾಗು ದೇಶದ, ರಾಜ್ಯದ ಪ್ರಭಾವಿ ನಾಯಕ. ಅವರನ್ನು ಬಂಧಿಸುವ ಮೂಲಕ ಸಮುದಾಯಕ್ಕೆ ಬಿಜೆಪಿ ಕಳಂಕ ಉಂಟುಮಾಡಿದೆ “ಸುಳ್ಯಕ್ಕೂ ಡಿ.ಕೆ.ಶಿವಕುಮಾರ್‌ರಿಗೂ ಅವಿನಾಭಾವ ಸಂಬಂಧವಿದೆ ಎಂದು ಹೇಳಿದರು.

ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಮಾಜಿ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ಮಾಜಿ ನ.ಪಂ. ಸದಸ್ಯ ಮುಸ್ತಫಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ಕೋಲ್ಚಾರ್, ಹಾಗೂ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *