Header Ads
Breaking News

ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ಪ್ರಕರಣ : ಉಡುಪಿಯಲ್ಲಿ ಹಿಂದೂ ಜನಜಾಗೃತಿ ವತಿಯಿಂದ ಪ್ರತಿಭಟನೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಭಾಗವಹಿಸಿದವರ ವಿರುದ್ದ ಹಾಗೂ ಪಾಕಿಸ್ಥಾನದ ಪರ ಘೋಷಣೆ ಕೂಗುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಉಡುಪಿಯಲ್ಲಿ ಹಿಂದೂ ಜನಜಾಗೃತಿ ಸಮಿತಿ ಪ್ರತಿಭಟನೆ ನಡೆಸಿತು. ಉಡುಪಿಯ ಅಜ್ಜರಕಾಡು ಬಳಿಕ ಹುತಾತ್ಮರ ಸೈನಿಕ ಸ್ಮಾರಕದ ಎದುರು ಪ್ರತಿಭಟನೆ ನಡೆಸಿದ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ದೇಶದಲ್ಲಿ ಹಿಂಸಾಚಾರಕ್ಕೆ ಇಳಿದ ದೇಶ ದ್ರೋಹಿಗಳ ವಿರುದ್ದ ಘೋಷಣೆಗಳನ್ನು ಕೂಗಿದರು. ಸಿಎ.ಎ ಪ್ರತಿಭಟನೆಯ ಹೆಸರಿನಲ್ಲಿ ದೇಶದಲ್ಲಿ ಹಿಂಸಾಚಾರದಲ್ಲಿ ದೇಶದ್ರೋಹಿಗಳು ತೊಡಗಿದ್ದು ಇದಕ್ಕೆ ವಿದೇಶಿ ಕುಮ್ಮಕ್ಕು ಇದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ದೇಶದಲ್ಲಿದ್ದುಕೊಂಡು ದೇಶದ ಸವಲತ್ತು ಪಡೆದು ಪಾಕಿಸ್ಥಾನದ ಪರ ಘೋಷಣ್‌ಎ ಕೂಗುವವರ ವಿರುದ್ದವೂ ಕಠಿನ ಕ್ರಮವನ್ನು ಸರಕಾರ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವಿಜಯ್ ಕುಮಾರ್ ಆಗ್ರಹಿಸಿದರು.

Related posts

Leave a Reply

Your email address will not be published. Required fields are marked *