Header Ads
Breaking News

ದ.ಕ. ಜಿಲ್ಲೆಯಲ್ಲಿ ಲಾಕ್‍ಡೌನ್ ವಿಚಾರ : ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ ತಹಶೀಲ್ದಾರ್

ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಸರಕಾರ ಲಾಕ್ ಡೌನ್ ಆದೇಶವನ್ನು ನೀಡಿದರೂ ಕೂಡ ನಗರ ಪ್ರದೇಶಗಳಲ್ಲಿ ಜನ ಜಂಗುಳಿ ಕಂಡು ಬಂದ ಹಿನ್ನಲೆಯಲ್ಲಿ ಬಂಟ್ವಾಳ ತಹಶೀಲ್ದಾರ್ ಸ್ವತಃ ಕಾರ್ಯಚರಣೆಗೆ ಇಳಿದು ಅಂಗಡಿ, ಮಳಿಗೆಗಳನ್ನು ಬಂದ್ ಗೊಳಿಸುವಂತೆ ಮನವಿ ಮಾಡಿದರು.

ಪುದು ಗ್ರಾಮದ ಫರಂಗಿಪೇಟಯಲ್ಲಿ ಅಂಗಡಿ ಅಂಗಡಿಗಳಿಗೆ ತೆರಳಿ ಮನವರಿಕೆ ಮಾಡಿದ ಅವರು ಫರಂಗಿಪೇಟೆ ಜಂಕ್ಷನ್‍ನಲ್ಲಿ ಮೈಕ್ ಅನೌಂನ್ಸ್ ಮೆಂಟ್ ಮೂಲಕ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಿದರು. ಇದರಿಂದಾಗಿ ಮಧ್ಯಾಹ್ನದ ವೇಳೆಗೆ ಎಲ್ಲಾ ಅಂಗಡಿಗಳು ಬಂದ್ ಆದವು. ಈ ಸಂದರ್ಭ ಕಂದಾಯ ನಿರೀಕ್ಷಕ ರಾಮಕಾಟಿಪಳ್ಳ, ತಾಲೂಕು ಕಚೇರಿ ಸಿಬ್ಬಂದಿಗಳು ಹಾಜರಿದ್ದರು.

Related posts

Leave a Reply

Your email address will not be published. Required fields are marked *