Header Ads
Breaking News

ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಅಂತಾರಾಷ್ಟ್ರೀಯ ಮಾದಕದ್ರವ್ಯ ಹಾಗೂ ಕಳ್ಳಸಾಗಾಟ ವಿರೋಧ ದಿನಾಚರಣೆ ಕಾರ್ಯಕ್ರಮ

ಮಂಗಳೂರು ನಗರ ಪೊಲೀಸ್ ಆಶ್ರಯದಲ್ಲಿ1 ತಿಂಗಳ ಕಾಲ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಹಾಗೂ ಕಳ್ಳ ಸಾಗಾಟ ವಿರೋಧ ಮಾಸಾಚರಣೆ ನಡೆಯುತ್ತಿದ್ದು, ಇಂದು ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ನಗರ ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ಅವರು ಚಾಲನೆ ನೀಡಿದ್ರು. ಈ ವೇಳೆ ಮಾತನಾಡಿದ ಅವರು, ಮಾದಕ ವಸ್ತುಗಳನ್ನು ಮಾರಾಟ ಮಾಡುವವರು ಮತ್ತು ಸೇವಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ ಎಂದು ಅವರು ತಿಳಿಸಿದರು. 

ಇನ್ನು ದೇರಳಕಟ್ಟೆ ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜಿನ ಪೊರೆನ್ಸಿಕ್ ವಿಭಾಗದ ಮುಖ್ಯಸ್ಥ ಡಾ|ಮಹಾಬಲ ಶೆಟ್ಟಿ ಮಾತನಾಡಿ, ಕಾಶ್ಮೀರ, ಪಂಜಾಬ್, ಮುಂತಾದೆಡೆಗಳಲ್ಲಿ ನಾರ್ಕೋ ಟೆರರಿಸಂ ವ್ಯಾಪಕವಾಗಿದೆ. ಶ್ರೀನಗರವೊಂದರಲ್ಲೇ ೮೦ ಸಾವಿರ ಮಂದಿ ಮಾದಕ ವ್ಯಸನಕ್ಕೆ ಒಳಗಾಗಿದ್ದು, ಕೇರಳದಲ್ಲಿ ಅತೀ ಹೆಚ್ಚು ಆತ್ಮಹತ್ಯೆಗಳು ಮಾದಕ ದ್ರವ್ಯ ವ್ಯಸನದ ಪರಿಣಾಮವಾಗಿಯೇ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ರು. ಈ ವೇಳೆ ಮನಃಶಾಸ್ತ್ರಜ್ಞೆ ಕ್ಯಾರೋಲಿನ್ ಸಿ. ಡಿಸೋಜಾ, ವಿಕಾಸ್ ಕಾಲೇಜಿನ ಪ್ರೋ. ಅನಂತ ಪ್ರಭು, ಡಿಸಿಪಿ ಹನುಮಂತರಾಯ ಸೇರಿದಂತೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *