Header Ads
Header Ads
Header Ads
Breaking News

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ಹಿನ್ನಲೆ : ಆಸ್ಪತ್ರೆಗೆ ಧಾವಿಸುತ್ತಿರುವ ವಿ.ಐ.ಪಿ ಗಳ ದಂಡು

ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾದ ಹಿನ್ನಲೆಯಲ್ಲಿ ಸ್ವಾಮೀಜಿಗಳು ಹಾಗೂ ರಾಜಕಾರಣಿಗಳು ಆಸ್ಪತ್ರೆಗೆ ಆಗಮಿಸಿ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಇಂದು ಕೂಡಾ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಅಂತ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಯ ಕಡೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆದ್ರೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ. ಇನ್ನು ಪೇಜಾವರ ಶ್ರೀಗಳನ್ನು ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಆಸ್ಪತ್ರೆಗೆ ಭೇಟಿ ನೀಡಿ ನೋಡಿ ಬಂದಿದ್ದಾರೆ. ಪೇಜಾವರ ಶ್ರೀಗಳ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ಮಧ್ಯಾಹ್ನದವರೆಗೆ ಶ್ರೀಗಳ ದೇಹದಿಂದ ಮೂತ್ರವಿಸರ್ಜನೆ ಮಾಡಿರುವುದು ನೋಡಿದ್ದೇನೆ. ಆದಷ್ಟು ಬೇಗ ಅವರು ಗುಣಮುಖರಾಗುತ್ತಾರೆ.ಯಾರೂ ಕೂಡ ಭೇಟಿ ಮಾಡಿ ತೊಂದರೆ ಕೊಡಬೇಡಿ. ಭಕ್ತರ ಭೇಟಿಯಿಂದ ಶ್ರೀಗಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ದೂರದಿಂದಲೇ ಅವರಿಗಾಗಿ ಪ್ರಾರ್ಥನೆ ಮಾಡಿ. ಶ್ರೀಗಳು ಗುಣಮುಖರಾಗುವಂತೆ ಪೂಜೆ ಪುನಸ್ಕಾರಗಳು ನಿರಂತರವಾಗಿ ನಡೆಯುತ್ತಿದೆ ಎಂದು ಪೇಜಾವರ ಮಠದ ಕಿರಿಯ ಯತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದರು. ಇನ್ನು ಸಚಿವ ಕೆಸ್. ಈಶ್ವರಪ್ಪ, ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಶಾಸಕ ರಘುಪತಿಭಟ್, ಬೆಂಗಳೂರಿನ ಉತ್ತರಾಧಿ ಮಠದ ಸತ್ಯಾತ್ಮ ತೀರ್ಥ ಸ್ವಾಮೀಜಿ, ಪೇಜಾವರ ಶ್ರೀಗಳ ಶಿಷ್ಯೆ ನೀರಾ ರಾಡಿಯಾ, ಸಂತೋಷ್ ಗುರೂಜಿ, ಮುಂತಾದ ಅನೇಕ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Related posts

Leave a Reply

Your email address will not be published. Required fields are marked *