Header Ads
Header Ads
Breaking News

ಫಲಾನುಭವಿಗಳಿಗೆ ಚೆಕ್ ವಿತರಣೆ : ಐವನ್ ಡಿಸೋಜಾ ಶಿಫಾರಸ್ಸಿನ ಮೇರೆಗೆ ಅನುದಾನ ಬಿಡುಗಡೆ

ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ವಿಧಾನ ಪರಿಷತ್‌ನ ಶಾಸಕರಾದ ಐವನ್ ಡಿಸೋಜಾ ಅವರ ಶಿಫಾರಸ್ಸಿನ ಮೇರೆಗೆ 17 ಜನ ಅರ್ಜಿದಾರರಿಗೆ ಪರಿಹಾರದ ಚೆಕ್ ವಿತರಣಾ ಕಾರ್ಯಕ್ರಮ ನಡೆಯಿತು.

ಮಂಗಳೂರಿನ ಮಹಾನಗರ ಪಾಲಿಕೆ ಕಚೇರಿಯಲ್ಲಿ ಶಾಸಕರಾದ ಐವನ್ ಡಿಸೋಜಾ ಅವರು ಫಲಾನುಭವಿಗಳಿಗೆ ಚೆಕ್ ಹಸ್ತಾಂತರಿಸಿದರು. ಸುಮಾರು ಒಂಭತ್ತು ಲಕ್ಷದ ಹದಿನಾರು ಸಾವಿರದ ಆರು ನೂರ ತೊಂಬತೈದು ರೂಪಾಯಿಗಳ ಚೆಕ್‌ನ್ನು ವಿತರಿಸಿದರು.

ಇದೇ ವೇಳೆ ಮಾತನಾಡಿದ ಐವನ್ ಡಿಸೋಜಾ ಅವರು, ಸುಮಾರು 17 ಮಂದಿ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳ ಪರಿಹಾರದ ನಿಧಿಯಿಂದ ಅನುದಾನ ಬಿಡುಗಡೆಗೊಳಿಸಲಾಗಿದೆ. ಮುಂದಿನ ದಿನದಲ್ಲಿ ಫಲಾನುಭವಿಗಳಿಗೆ ಚೆಕ್ ವಿತರಿಸು ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು.ಈ ಸಂದರ್ಭ ಕಾಂಗ್ರೆಸ್‌ನ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

Leave a Reply