Header Ads
Breaking News

ಫೆ.10ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ :1ರಿಂದ 19 ವರ್ಷದೊಳಗಿನ ಮಕ್ಕಳಿಗೆ ಮಾತ್ರೆ

ಇಂದಿನ ಮಕ್ಕಳು ಭವಿಷ್ಯದಲ್ಲಿ ಪೌಷ್ಠಿಕಯುಕ್ತ ಸುಧಾರಿತ ಆರೋಗ್ಯ ಹೊಂದಿರಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪದವಿ ಪೂರ್ವ ಕಾಲೇಜು, ಐಟಿಐ, ಶಾಲೆ ಹಾಗೂ ಅಂಗನವಾಡಿಗಳಲ್ಲಿ 1ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಹೇಳಿದರು.
ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪ್ರತೀ ವರ್ಷವೂ ಒಂದರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಬಂದಿದ್ದೇವೆ. ಈ ಬಾರಿಯೂ ಫೆಬ್ರವರಿ 10ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವನ್ನು ಆಚರಿಸಲಿದ್ದೇವೆ ಎಂದ ಅವರು, ಜಂತುಹುಳ ಬಾಧೆ ಹೇಗೆ ಹರಡುತ್ತದೆ. ಜಂತುಹುಳ ಭಾಧೆಯ ಲಕ್ಷಣಗಳು, ಜಂತುಹುಳ ಭಾದೆಯಿಂದ ಆರೋಗ್ಯ ಮತ್ತು ಪೌಷ್ಠಿಕತೆಯ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಡಾ. ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *