Header Ads
Header Ads
Header Ads
Breaking News

ಬನ್ನಂಜೆಯಲ್ಲಿ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ನೂತನ ಮಿನಿ ವಿಧಾನಸೌಧ ನಿರ್ಮಾಣ

ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಬನ್ನಂಜೆಯ ಮಿನಿ ವಿಧಾನ ಸೌಧದ ಉದ್ಘಾಟನಾ ಸಮಾರಂಭ ನಡೆಯಿತು. ಕಂದಾಯ ಸಚಿವ ಆರ್. ಅಶೋಕ್ ರಿಬ್ಬನ್ ಕತ್ತರಿಸುವ ಮೂಲಕ ಹಾಗೂ ದೀಪ ಬೆಳಗಿಸುವ ಮೂಲಕ ಮಿನಿ ವಿಧಾನ ಸೌಧ ಉದ್ಘಾಟಿಸಿದರು.

ಉಡುಪಿ ಬನ್ನಂಜೆಯಲ್ಲಿ ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಾಣಗೊಂಡಿದೆ. ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕರ್ನಾಟಕ ರಾಜ್ಯದ ಕಂದಾಯ ಸಚಿವ ಆರ್. ಅಶೋಕ್ ಅವರು ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ ವತಿಯಿಂದ ಜನರ ಮನೆ ಬಾಗಿಲಿಗೆ ತೆರಳಿ ಸೌಲಭ್ಯ ವಿತರಿಸುವ “ಹಳ್ಳಿಗಳಿಗೆ ನಡೆಯಿರಿ ಅಧಿಕಾರಿಗಳೇ’ ಎಂಬ ವಿನೂತನ ಕಾರ್ಯಕ್ರಮವನ್ನು ಶೀಘ್ರದಲ್ಲಿ ಜಾರಿಗೆ ತರಲಾಗುತ್ತದೆ. ಕಂದಾಯ ಸೇವೆಗಳನ್ನು ಗ್ರಾಮೀಣ ಜನರಿಗೆ ತಲುಪಿಸಲು ಎಲ್ಲ ಜಿಲ್ಲಾಧಿಕಾರಿಗಳು, ಉಪವಿಭಾಗಾ ಧಿಕಾರಿಗಳು ಮತ್ತು ತಹಶೀಲ್ದಾರ್‍ಗಳು ತಿಂಗಳಲ್ಲಿ ಒಂದು ದಿನ ತಮ್ಮ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಅರ್ಜಿ ಸಲ್ಲಿಕೆ ಮತ್ತು ವಿಲೇವಾರಿಗೆ ಬಾಕಿಯಿರುವ ಅರ್ಜಿದಾರರ ಮನೆ ಬಾಗಿಲಿಗೆ ತೆರಳಿ, ಸಮಸ್ಯೆ ಆಲಿಸಿ, ಸ್ಥಳದಲ್ಲೇ ಬಗೆಹರಿಸುವ ಕಾರ್ಯಕ್ರಮ ಇದಾಗಿದೆ ಎಂದರು. ಶಾಸಕರ ಮನವಿಯಂತೆ ಉಡುಪಿಯಲ್ಲಿ ಕಂದಾಯ ಉಪ ವಿಭಾಗ ತೆರೆಯಲಾಗುತ್ತದೆ ಎಂದರು. ಪ್ರತಿ ಗ್ರಾಮದಲ್ಲೂ ಶ್ಮಶಾನ ನಿರ್ಮಾಣಕ್ಕೆ ಜಾಗ ಗುರುತಿಸುವಂತೆ ಸರಕಾರ ಸೂಚಿಸಿದೆ. ರಾಜ್ಯದಲ್ಲಿ ಬಾಕಿ ಇರುವ ಶವಸಂಸ್ಕಾರ ಪರಿಹಾರದ ಮೊತ್ತ 70 ಕೋ.ರೂ. ಗಳನ್ನು ಬಿಡುಗಡೆಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಶವಸ್ಕಾರದ ಮೊತ್ತ 5,000 ರೂ. ಮನೆಯವರ ಕೈ ಸೇರುವಂತೆ ಮಾಡಲಾಗುತ್ತದೆ ಎಂದರು.

ಕಂದಾಯ ವಿಭಾಗದ ರಾಜ್ಯ ಪಟ್ಟಿಯಲ್ಲಿ ಉಡುಪಿ ಜಿಲ್ಲೆ ನಂಬರ್ ಸ್ಥಾನ ಪಡೆದುಕೊಂಡಿದೆ. ಕಂದಾಯ ಇಲಾಖೆಯ ವತಿಯಿಂದ ನೀಡುವ ರ್ಯಾಕಿಂಗ್ ಪಟ್ಟಿಯಲ್ಲಿ ವಾರ್ಷಿಕ 5ಕ್ಕಿಂತ ಹೆಚ್ಚು ಬಾರಿ ಪ್ರಥಮ ಸ್ಥಾನ ಪಡೆದುಕೊಂಡ ಜಿಲ್ಲೆಗೆ 5 ಕೋ.ರೂ. ಬಹುಮಾನ ಘೋಷಣೆ ಮಾಡಬೇಕು ಎಂದು ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ವಸತಿ ಸಚಿವ ವಿ. ಸೋಮಣ್ಣ, ಶಾಸಕ ಸುನಿಲ್ ಕುಮಾರ್, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ್ ಪೂಜಾರಿ, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿ.ಪಂ. ಸಿಇಒ ಪ್ರೀತಿ ಗೆಹ್ಲೋಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಪವಿಭಾಗಾಧಿಕಾರಿ ರಾಜು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *