Breaking News

ಭಟ್ಕಳ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ, ಪತ್ರಕರ್ತರಿಗಾಗಿ ಜಿಲ್ಲಾ ಮಟ್ಟದ ಕಾರ್ಯಾಗಾರ

ಭಟ್ಕಳ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ಜುಲೈ 8 ರಂದು ತಾಲೂಕಿನ ಶ್ರೀ ನಾಗಯಕ್ಷೆ ಧರ್ಮಾರ್ಥ ಸಭಾ ಭವನದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಜಿಲ್ಲೆಯ ವಕೀಲರು ಹಾಗೂ ಪತ್ರಕರ್ತರಿಗಾಗಿ ಜಿಲ್ಲಾ ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ, ಕಾರ್ಯದರ್ಶಿ ಭಾಸ್ಕರ ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಾಗಾರವನ್ನು ಮಾಜಿ ಲೋಕಾಯುಕ್ತ ಹಾಗೂ ನಿವೃತ್ತ ಸುಪ್ರೀಂ ಕೋರ್ಟ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಮಂಕಾಳ ಎಸ್. ವೈದ್ಯ ವಹಿಸಲಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ಳಿಹಬ್ಬದ ಸವಿನೆನಪಿಗಾಗಿ ಹೊರತರಲು ಉದ್ದೇಶಿಸಿರುವ ಸ್ಮರಣ ಸಂಚಿಕೆಯ ಮನವಿ ಪತ್ರ ಬಿಡುಗಡೆಯನ್ನು ಜಿಲ್ಲೆಯ ಹಿರಿಯ ಪತ್ರಕರ್ತ ಜಿ.ಯು.ಭಟ್ಟ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಖಾಜಿಯಾ ಬಿಲ್ಡರ್ಸ ಎಂಡ್ ಡೆವಲಪರ್ಸ ಇದರ ಮಾಲಕ ಮೊಹಮ್ಮದ್ ಯುನುಸ್ ಖಾಜಿಯಾ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಎನ್. ರಾಜು, ಜಿಲ್ಲಾಧ್ಯಕ್ಷ ಸುಬ್ರಾಯ ಭಟ್ಟ ಬಕ್ಕಳ, ಶ್ರೀ ನಾಗಯಕ್ಷೆ ಧರ್ಮದೇವಿ ಸಂಸ್ಥಾನದ ಅಧ್ಯಕ್ಷ ರಾಮದಾಸ ಪ್ರಭು ಉಪಸ್ಥಿತರಿರಲಿದ್ದಾರೆ ಎಂದೂ ತಿಳಿಸಲಾಗಿದೆ. ಕಾರ್ಯಕ್ರಮದಲ್ಲಿ ಮೊಹರೆ ಹಣಮಂತರಾವ್ ರಾಜ್ಯ ಪ್ರಶಸ್ತಿಗೆ ಭಾಜನರಾಗಿರುವ ಕರಾವಳಿ ಮುಂಜಾವು ವ್ಯವಸ್ಥಾಪಕ ಸಂಪಾದಕ ಗಂಗಾಧರ ಹಿರೇಗುತ್ತಿಯವರನ್ನು ಗೌರವಿಸಲಾಗುವುದು. ಪ್ರತಿ ವರ್ಷದಂತೆ ಪತ್ರಿಕಾ ದಿನಾಚರಣೆಯ ಅಂಗವಾಗಿ ಸಮಾಜ ಸೇವಕರು, ವಿಜಯಾ ಬ್ಯಾಂಕ್ ನಿವೃತ್ತ ಹಿರಿಯ ಶಾಖಾಧಿಕಾರಿ ಎಂ. ಆರ್. ನಾಯ್ಕ ಅವರನ್ನು ಹಾಗೂ ಹಿರಿಯ ಪತ್ರಿಕಾ ವಿತರಕರಾದ ಹನುಮಂತ ಪ್ರಭು ಅವರನ್ನು ಸನ್ಮಾನಿಸಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿ: ರಾಘವೇಂದ್ರ ಮಲ್ಯ ಭಟ್ಕಳ

Related posts

Leave a Reply