Header Ads
Header Ads
Breaking News

ಮಾರ್ಚ್9ರಂದು ಮಾಣಿ ಕರ್ನಾಟಕ ವಿದ್ಯಾ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನೆ

ಬಂಟ್ವಾಳ: ಮಾಣಿ ಕರ್ನಾಟಕ ವಿದ್ಯಾ ಸಂಸ್ಥೆಯ ನೂತನ ಕಟ್ಟಡವು ರೋಟರಿ ಕ್ಲಬ್ ಸಹಕಾರದೊಂದಿಗೆ ಲೋಕಾರ್ಪಣೆ, ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ಮಾ. ೯ರಂದು ಶಾಲಾ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಣಿ ಶಾಲೆಯ ಆಡಳಿತ ಸಮಿತಿಯ ಸದಸ್ಯ ಕೆ.ಎನ್.ಗಂಗಾಧರ್ ಆಳ್ವ ತಿಳಿಸಿದ್ದಾರೆ.

ಅವರು ಗುರುವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಟ್ವಾಳ ರೋಟರಿ ಕ್ಲಬ್, ದಿ. ಉರ್ದಿಲಗುತ್ತು ಇಂದುಹಾಸ ರೈ ಕುಟುಂಬಸ್ಥರು, ದಿ. ಹಾಜಿ ಹುಸೈನ್ ಸುಲ್ತಾನ್ ಬೀಡಿ ಹಾಗೂ ದಾನಿಗಳ ಸಹಾಯದಿಂದ ಸುಮಾರು ೩೨ ಲಕ್ಷ ರೂ. ವೆಚ್ಚದಲ್ಲಿ ನೂತನ ಆಂಗ್ಲ ಮಾಧ್ಯಮ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ರೋಟರಿಯ ನಿಯೋಜಿತ ಗವರ್ನರ್ ರಂಗನಾಥ್ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ಸಭಾಧ್ಯಕ್ಷತೆ ವಹಿಸುವರು. ಶಾಸಕ ರಾಜೇಶ್ ನಾಕ್, ಮಾಜಿ ಸಚಿವ ರಮಾನಾಥ ರೈ, ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಶಿವರಾಮಯ್ಯ, ಕ್ಷೇತ್ರ ಶೀಕ್ಷಣಾಧಿಕಾರಿ ಶಿವಪ್ರಕಾಶ್ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು.
ಶಾಲೆಯ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿಹೊಂದಿದ ಪಿ. ಗಂಗಾಧರ ರೈ ಅವರ ಬೀಳ್ಕೊಡುಗೆ ಸಮಾರಂಭ ಹಾಗೂ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ನಡೆಯಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ, ಮಾಣಿ ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ಕಾರ್ಯದರ್ಶಿ ಇಬ್ರಾಹಿಂ, ಬಂಟ್ವಾಳ ರೋಟರಿ ಕ್ಲಬ್‌ನ ಶಿವಾನಿ ಬಾಳಿಗ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *