Header Ads
Breaking News

ಮೀನುಗಾರಿಕಾ ಬೋಟ್‍ಗೆ ಅಪ್ಪಳಿಸಿದ ಭಾರೀ ಗಾತ್ರದ ಅಲೆ : ಪವಾಡಸದೃಶವಾಗಿ ಪಾರಾದ ಆರು ಮಂದಿ ಮೀನುಗಾರರು

ಹವಮಾನ ಇಲಾಖೆ ಮುನ್ಸೂಚನೆ ಇದ್ದರೂ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಮಧ್ಯದಲ್ಲಿ ಮಗುಚಿಬಿದ್ದು ಅದರಲ್ಲಿದ್ದ ಆರು ಮಂದಿ ಮೀನುಗಾರರು ಯಾವುದೇ ಪ್ರಾಣಾಯಪಾಯ ಇಲ್ಲದೇ ಪಾರಾದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಮುಕ್ಕ ಸಸಿಹಿತ್ಲು ಬೀಚ್‍ನಲ್ಲಿ 6 ಮಂದಿ ಯುವಕರು ಮೀನು ಹಿಡಿಯಲೆಂದು ಸಮುದ್ರಕ್ಕೆ ತೆರಳಿದ್ದರು. ಆದರೆ ಸಮುದ್ರ ಮಧ್ಯೆ ಹವಾಮಾನ ವೈಪರಿತ್ಯದ ಕಾರಣದಿಂದ ದೋಣಿಯು ಮಗುಚಿ ಬಿದ್ದಿದ್ದು, ಅಪಾಯದ ಕ್ಷಣದ ವಿಡಿಯೋಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಯ್ತು. ಇನ್ನು ಇದರಲ್ಲಿದ್ದ ಮೂರು ಮಂದಿ ಈಜಿಕೊಂಡು ದಡ ಸೇರಿದ್ದು, ಇನ್ನಿಬ್ಬರನ್ನು ಮತ್ತೊಂದು ದೋಣಿಯ ಮೂಲಕ ರಕ್ಷಿಸಲಾಗಿದೆ. ಉಳಿದ ಒರ್ವ ಮೀನುಗಾರ ಉತ್ತರ ದಿಕ್ಕಿನಲ್ಲಿ ಸಾಗುತ್ತಿದ್ದ ದೋಣಿಯವರೆಗೆ ಈಜಿಕೊಂಡು ಸಾಗಿ ಸ್ವಯಂ ರಕ್ಷಣೆಗೊಳಗಾಗಿದ್ದಾರೆ. ಅವರು ಆ ದೋಣಿಯ ಮೂಲಕ ಸುರಕ್ಷಿತವಾಗಿ ದಡಕ್ಕೆ ಸೇರಿದ್ದಾರೆ.

Related posts

Leave a Reply

Your email address will not be published. Required fields are marked *