Header Ads
Breaking News

ಲ್ಯಾಂಡಿಂಗ್ ವೇಳೆ ರನ್‍ವೇಯಿಂದ ಜಾರಿದ ವಿಮಾನ: ಮಂಗಳೂರು ಏರ್ಪೋರ್ಟ್‍ನಲ್ಲಿ ತಪ್ಪಿದ ಭಾರೀ ಅನಾಹುತ

ಕೂದಲೆಳೆಯ ಅಂತರದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವಘಡವೊಂದು ತಪ್ಪಿದೆ. ದುಬೈನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‍ಪ್ರೆಸ್ ವಿಮಾನವು ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಜಾರಿದ ಘಟನೆ ಇಂದು ಸಂಜೆ ಸಂಭವಿಸಿದೆ.

ಘಟನೆಯಲ್ಲಿ ಯಾವುದೇ ರೀತಿಯ ಅನಾಹುತ ಸಂಭವಿಸದೇ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ ಸುಮಾರು 5.30ರ ಸಮಯಕ್ಕೆ ದುಬೈ ನಿಂದ ಏರ್ ಇಂಡಿಯಾ ಏಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ಆಗುತ್ತಿದ್ದಂತೆ ರನ್ ವೇ ಯಿಂದ ಜಾರಿ ಮುಂದುವರಿದಿದೆ ನಂತರ ಚಕ್ರ ಮಣ್ಣಿನಲ್ಲಿ ಸಿಲುಕಿಕೊಂಡ ಪರಿಣಾಮ ವಿಮಾನ ನಿಂತಿದೆ.

ಬಳಿಕ ವಿಮಾನದಿಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಪೈಲೆಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ ತಪ್ಪಿದೆ. ಸದ್ಯ ಮಂಗಳೂರು ವಿಮಾನ ನಿಲ್ದಾಣದ ಎಲ್ಲಾ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡಿದ್ದು, ವಿಮಾನ ಹಾರಾಟ ಮತ್ತು ಆಗಮನ ಸ್ಥಗಿತಗೊಳಿಸಲಾಗಿದೆ. ರನ್ ವೇ ದಾಟಿ ಸಾಕಷ್ಟು ಎದುರು ಬಂದು ವಿಮಾನ ಲ್ಯಾಂಡಿಂಗ್ ಆಗಿದ್ದು, ದುರಂತ ತಪ್ಪಿದ ಹಿನ್ನೆಲೆ 183 ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

 

Related posts

Leave a Reply

Your email address will not be published. Required fields are marked *