Header Ads
Header Ads
Breaking News

ವಿದ್ಯಾರ್ಥಿಗಳನ್ನು ತನ್ನತ್ತ ಆಕರ್ಷಿಸುತ್ತಿರುವ “ತಾರಾಲಯ”

ಬಂಟ್ವಾಳ: ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಯ ದೃಷ್ಟಿಯಿಂದ ಬಂಟ್ವಾಳ ರೋಟರಿ ಕ್ಲಬ್ ಹಮ್ಮಿಕೊಂಡಿರುವ ಸಂಚಾರಿ ತಾರಾಲಯ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ತನ್ನತ್ತ ಆಕರ್ಷಿಸುತ್ತಿದೆ.ಶುಕ್ರವಾರ ಮೊಹರಂ ಹಬ್ಬದ ಪ್ರಯುಕ್ತ ಶಾಲೆಗಳಿಗೆ ರಜೆ ಇದ್ದ ಹಿನ್ನಲೆಯಲ್ಲಿ ಬಿ.ಸಿ.ರೋಡಿನ ರೋಟರಿ ಸಭಾಭವನದಲ್ಲಿ ತಾರಾಲಯ ವೀಕ್ಷಣೆಗೆ ಅವಕಾಶ ಕಲ್ಪಸಲಾಗಿತ್ತು. ಸ್ಥಳೀಯ ಶಾಲೆಯ ವಿದ್ಯಾರ್ಥಿಗಳು ಆಗಮಿಸಿ ಸೌರಮಂಡಲದ ಚಟುವಟಿಕೆಯನ್ನು ವೀಕ್ಷಿಸಿ ಸಂಭ್ರಮಿಸಿದರು.

 

ಮಾಜಿ ಸಚಿವ ಬಿ.ರಮಾನಾಥ ರೈಯವರು ಸಂಚಾರಿ ತಾರಾಲಯಕ್ಕೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಅವರು ಈ ಸಂದರ್ಭ ವಿ4 ನ್ಯೂಸ್‌ನೊಂದಿಗೆ ಮಾತನಾಡಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ದೃಷ್ಟಿಯಿಂದ ಬಂಟ್ವಾಳ ರೋಟರಿ ಕ್ಲಬ್ ತಾರಾಲಯ ಕಲ್ಪನೆಯನ್ನು ಮಾಡಿರುವುದು ಅಭಿನಂದನೀಯ ಇದರಿಂದ ಬಾಹ್ಯಾಕಾಶದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳುವಳಿಕೆ ಹೊಂದಲು ಸಾಧ್ಯವಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯಿತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಮತ್ತಿತರರು ಹಾಜರಿದ್ದರು.

Related posts

Leave a Reply