
ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಶ್ರೀನಿವಾಸ್ ವಿಶ್ವವಿದ್ಯಾಲಯದ ಶಿಕ್ಷಕ ಶಿಕ್ಷಣ ವಿದ್ಯಾಲಯದ ಆಶ್ರಯದಲ್ಲಿ ಡಿಸೆಂಬರ್ 26ರಂದು ಭವಿಷ್ಯ ಶಿಕ್ಷಣದ ನೋಟ ಎಂಬ ಬಗ್ಗೆ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ನಡೆಯಲಿದೆ.ಈ ಬಗ್ಗೆ ಶ್ರೀನಿವಾಸ್ ಸಿಟಿ ಕ್ಯಾಂಪಸ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀನಿವಾಸ್ ಶಿಕ್ಷಣ ಮಹಾವಿದ್ಯಾಲಯದ ಡೀನ್ ಡಾ. ಜಯಶ್ರೀ ಕೆ ಅವರು, ಶ್ರೀನಿವಾಸ್ ವಿದ್ಯಾಲಯದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದ್ದೇವೆ. ಸೈಂಟ್ ಆನ್ಸ್ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ವಿಜಯಕುಮಾರಿ ಅವರು ವರ್ಚುವಲ್ ವೇದಿಕೆ ಮೂಲಕ ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.ಆನಂತರ ಶ್ರೀನಿವಾಸ್ ಕಾಲೇಜ್ ಆಫ್ ಎಜ್ಯುಕೇಶನ್ ಅಸೋಸಿಯೇಟ್ ಪ್ರೊ. ಡಾ. ವಿಜಯಲಕ್ಷ್ಮೀ ನಾಯಕ್ ಅವರು ಡಿಸೆಂಬರ್ 26ರಂದು ಬೆಳಗ್ಗೆ 10 ಗಂಟೆಗೆ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.ಇದೇ ವೇಳೆ ಕಾರ್ಯಕ್ರಮದ ಸಂಯೋಜಕರಾದ ರೇಶ್ಮಾ ಎಂ. ವೈ ಅವರು ಮಾತನಾಡಿ, ಹೊಸ ಶಿಕ್ಷಣ ನೀತಿ 2020ರ ಶಿಕ್ಷಕರ ಶಿಕ್ಷಣ ಗುಣಮಟ್ಟ ಮತ್ತು ಶಿಕ್ಷಕರ ಸಬಲೀಕರಣದಲ್ಲಿನ ಸುಧಾರಣೆ ಎಂಬ ವಿಷಯದ ಬಗ್ಗೆ ವಿಚಾರಗೋಷ್ಟಿ ನಡೆಯಲಿದೆ. ಈ ವಿಚಾರ ಸಂಕಿರಣದಲ್ಲಿ ಪ್ರಶಿಕ್ಷಣಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು, ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಲೇಖನವ್ನನು ಮಂಡಿಸಲಿದ್ದಾರೆ ಎಂದು ಹೇಳಿದರು.
ಡಾ. ಜಯಶ್ರೀ .ಕೆ
ಡೀನ್, ಶ್ರೀನಿವಾಸಶಿಕ್ಷಣಮಹಾವಿದ್ಯಾಲಯ
0824-4258493
ಶ್ರೀಮತಿರೇಶ್ಮಾಎಂ. ವೈ
8618217055