Header Ads
Header Ads
Breaking News

ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಆಮ್ಟೆ ದಂಪತಿಗಳಿಗೆ ಮೂಲತ್ವ ವಿಶ್ವಪ್ರಶಸ್ತಿ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ತನ್ನ 2019ರ ಮೂಲತ್ವ ವಿಶ್ವಪ್ರಶಸ್ತಿಯನ್ನು ಖ್ಯಾತ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಆಮ್ಟೆದಂಪತಿಗಳಿಗೆ ನೀಡಿ ಗೌರವಿಸಲಾಗುತ್ತದೆ ಅಂತಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಮೂಲತ್ವ ಹೇಳಿದ್ರು.ಮಂಗಳೂರಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶಸ್ತಿ ಪ್ರದಾನ ಸಮಾರಂಭವೂ ಫೆಬ್ರವರಿ 16ರಂದು ಸಂಜೆ 5.30ಕ್ಕೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆಯಲ್ಲಿ ಜರುಗಲಿದೆ.ನಿಟ್ಟೆ ವಿಶ್ವವಿದ್ಯಾನಿಲಯ ಕುಲಪತಿ ಎನ್.ವಿನಯ್ ಹೆಗ್ಡೆ, ಕಾವಳಪಾಡುರು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಗ್ರಾಮ ಪಂಚಾಯತ್ ಸದಸ್ಯ ಚಂದ್ರಶೇಖರ್ ಕರ್ಣ, ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೋ.ತುಕಾರಾವ್ ಪೂಜಾರಿ ಸೇರಿದಂತೆ ಇನ್ನಿತರ ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಈ ವೇಳೆ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟಿ ಕಲ್ಪನಾಕೋಟ್ಯಾನ್, ಸಂಚಾಲಕರಾದ ಪುರುಷೋತ್ತಮ ಚಿತ್ರಾಪುರ ಮತ್ತಿತರರು ಸುದ್ಧಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Related posts

Leave a Reply