
ಸುಳ್ಯ ವಿಧಾನಸಭಾ ಕ್ಷೇತ್ರದ ಎಸ್. ಅಂಗಾರ ಅವರು ಸಚಿವರಾಗಿರುವುದು ಖುಷಿ ತಂದಿದೆ. ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾಣಲಿ. ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಿ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು. ಈ ಕುರಿತು ಮಂಗಳೂರಲ್ಲಿ ಮಾತನಾಡಿದ ಅವರು, ಸುಳ್ಯ ಕ್ಷೇತ್ರದ ಜನತೆ ಒತ್ತಡದಿಂದ ಅವರಿಗೆ ನ್ಯಾಯ ಸಿಕ್ಕಿದೆ, ಕೋಟಾ ಶ್ರೀನಿವಾಸ್ ಪೂಜಾರಿ ಅವರು ನೆರೆಯ ಜಿಲ್ಲೆಯವರು, ಜಿಲ್ಲೆಯವರೇ ಆದ ಅಂಗಾರ ಉಸ್ತುವಾರಿ ಸಚಿವರಾಗಲಿ. ಆ ಮೂಲಕ ಅಭಿವೃದ್ಧಿ ಕೆಲಸ ಮಾಡಲಿ ಎಂದು ಅವರು ಹೇಳಿದ್ರು.