Header Ads
Header Ads
Breaking News

ಅಂತರರಾಷ್ಟ್ರೀಯ ಮಟ್ಟದ ನ್ಯಾನೋ ಟೆಕ್ನೋಲಜಿ ಸಮ್ಮೇಳನ : ಸುದ್ದಿಗೋಷ್ಠಿಯಲ್ಲಿ ಕುಲಪತಿ ಡಾ. ಪಿ.ಎಸ್ ಐತಾಳ್ ಮಾಹಿತಿ

ಅಂತರರಾಷ್ಟ್ರೀಯ ಮಟ್ಟದ ನ್ಯಾನೋ ಟೆಕ್ನೋಲಜಿ ಸಮ್ಮೇಳನವು ಅಕ್ಟೋಬರ್ 18 ಮತ್ತು 19ರಂದು ಮಂಗಳೂರಿನಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾನಿಲಯದಲ್ಲಿ ನಡೆಯಲಿದೆ ಎಂದು ಕುಲಪತಿ ಡಾ.ಪಿ.ಎಸ್. ಐತಾಳ್ ತಿಳಿಸಿದರು.

ಮಂಗಳೂರಿನ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. 21ನೇ ಶತಮಾನದಲ್ಲಿ ಬಹುತೇಕ ಎಲ್ಲಾ ಸಂಶೋಧನೆಗಳು ನ್ಯಾನೋ ತಂತ್ರಜ್ಞಾನವನ್ನು ಬಳಸಿಕೊಂಡಿರುತ್ತದೆ. ಈ ಸಮ್ಮೇಳನದಿಂದ ಎಲ್ಲಾ ವಿಜ್ಞಾನಿಗಳು ಸಂಶೋಧನಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಲಾಭ ಸಿಗಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಡಾ. ಭೈರಪ್ಪ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ. ವಿ.ಪಿ. ಎನ್ ನಾಂಪುರಿ, ಕೊಚ್ಚಿನ್ ವಿಶ್ವ ವಿದ್ಯಾನಿಲಯದ ಪ್ರೊಫೆಸರ್. ಡಾ. ಪ್ರಶಾಂತ್ ಕೆ. ಫ್ರಾನ್ಸ್ ಭಾಗವಹಿಸಲಿದ್ದಾರೆ.
ಸುಮಾರು ನೂರಕ್ಕೂ ಹೆಚ್ಚು ಸಂಶೋಧನಾ ಕೃತಿಗಳು ದೇಶ ವಿದೇಶಗಳಿಂದ ಬಂದಿದು, ಅವುಗಳ ಮಂಡನೆ ನಡೆಯಲಿದೆ. 250ಕ್ಕೂ ಹೆಚ್ಚು ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವು ಅಕ್ಟೋಬರ್ 18ರಂದು ನೆರವೇರಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನನು ಶ್ರೀನಿವಾಸ್ ಯುನಿವರ್ಸಿಟಿಯ ಕುಲಾಧಿಪತಿಗಳಾದ ಸಿಎ ಎ ರಾಘವೇಂದ್ರ ರಾವ್, ಸಹಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ್ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ರಿಜಿಸ್ಟ್ರಾರ್ ಡಾ. ಅನಿಲ್ ಕುಮಾರ್, ಡೀನ್ ಡಾ, ಥೋಮಸ್ ಪಿಂಟೋ, ಕನ್ವೀನರ್ ಡಾ. ಪ್ರವೀಣ್ ಬಿ.ಎಂ. ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *