Header Ads
Header Ads
Header Ads
Breaking News

ಅಂತರ್ ಜಿಲ್ಲಾ ಮಟ್ಟದ ಈಜು ಸ್ಪರ್ಧೆಗೆ ಚಾಲನೆ : 204 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗಿ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಅಂತರ್ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯು ಕಾರ್ಕಳ ನೂತನ ಈಜುಕೊಳದಲ್ಲಿ ನಡೆಯುತ್ತಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಇಂದು ನಡೆದ ಸ್ಪರ್ಧೆಯಲ್ಲಿ ಸುಮಾರು 200ಕ್ಕೂ ಅಧಿಕ ಈಜುಪಟುಗಳು ಭಾಗವಹಿಸಿದ್ದರು.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಈಜು ಸ್ಪರ್ಧೆಗೆ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಾಸಕರಾದ ಸುನಿಲ್ ಕುಮಾರ್ ಅವರು ಈಜುಕೊಳ ನಿರ್ಮಾಣ ಮಾಡಲು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ. ನಿನ್ನೆ ಗೃಹಸಚಿವರಾದ ಬಸವರಾಜ್ ಬೊಮ್ಮಾಯಿ ಅವರು 1.64 ಲಕ್ಷ ರೂ. ವೆಚ್ಚದ ಈಜುಕೊಳವನ್ನು ಉದ್ಘಾಟಿಸಿದ್ದಾರೆ. ಇದರ ಉಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಹೇಳಿದರು. ಈ ಸ್ಪರ್ಧೆಯಲ್ಲಿ ಸುಮಾರು 204 ಮಂದಿ ಸ್ಪರ್ಧಿಗಳು ಪಾಲ್ಗೊಂಡಿದ್ದಾರೆ. ಈ ಸಂದರ್ಭ ತಾಲೂಕು ಪಂಚಾಯತ್ ಸದಸ್ಯರಾದ ಪ್ರವೀಣ್, ಜಿಲ್ಲಾ ಈಜು ಅಧ್ಯಕ್ಷರಾದ ರಾಮಕೃಷ್ಣ, ಮಂಗಳೂರಿನ ಮಂಗಳಾ ಸ್ವಿಮ್ಮಿಂಗ್ ಕ್ಲಬ್‌ನ ತರಬೇತುದಾರ ಶಿವಾನಂದ್ ಗಟ್ಟಿ, ಸಹಾಯಕ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಕ ಗಣಪಯ್ಯ ಮತ್ತಿತರರು ಉಪಸ್ಥಿತರಿದ್ದರು.

 

Related posts

Leave a Reply

Your email address will not be published. Required fields are marked *