Header Ads
Header Ads
Header Ads
Header Ads
Header Ads
Header Ads
Breaking News

ಅಕ್ಟೋಬರ್ 5ರಂದು ದ.ಕ. ಜಿಲ್ಲಾ ಸರ್ವಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಸರ್ವಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಅಕ್ಟೋಬರ್ 5ರಂದು ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಎನ್‍ಐಸಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ರೂಪೇಶ್ ಶೆಟ್ಟಿ ತಿಳಿಸಿದರು.
ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಯುವ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷ ಮತ್ತು ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಮಿಥುನ್ ರೈ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್‍ನ ಸದಸ್ಯರು ಮತ್ತು ಜಿಲ್ಲಾ ಕಾಂಗ್ರೆಸ್‍ನ ಅಧ್ಯಕ್ಷರಾದ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಯು.ಟಿ. ಖಾದರ್, ಐವನ್ ಡಿಸೋಜಾ, ಮಾಜಿ ಶಾಸಕ ಜೆ.ಆರ್. ಲೋಬೋ ಭಾಗವಹಿಸಿದ್ದಾರೆ ಎಂದು ಹೇಳಿದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಸುಮನ್ ಆಳ್ವ, ನಿತೇಶ್ ಶೆಟ್ಟಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *