Header Ads
Header Ads
Breaking News

ಅಕ್ರಮ ಜಾನುವಾರು ಸಾಗಾಟ : 22 ಜಾನುವಾರುಗಳು ಪೊಲೀಸರ ವಶಕ್ಕೆ

ಹಾಸನದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಬೆನ್ನಟ್ಟಿದ ನೆಲ್ಯಾಡಿ ಪೋಲೀಸರು ನೆಲ್ಯಾಡಿಯ ಕೋಲ್ಪೆ ಎಂಬಲ್ಲಿ ಲಾರಿಯನ್ನು ತಡೆಹಿಡಿದು ಲಾರಿಯಲ್ಲಿದ್ದ 22 ಜಾನುವಾರುಗಳನ್ನು ವಶಪಡಿಸಿಕೊಂಡು ಒಬ್ಬನನ್ನು ಬಂಧಿಸಿದ ಘಟನೆ ಇಂದು ಮುಂಜಾನೆ ನಡೆದಿದೆ. ಬಂಧಿತ ಆರೋಪಿಯನ್ನು ನವಾಝ್ ತುಮಕೂರು ಎಂದು ಹೇಳಲಾಗಿದೆ. ನೆಲ್ಯಾಡಿ ಹೊಸಮಜಲು ಎಂಬಲ್ಲಿಂದ ಪೋಲೀಸ್ ವಾಹನವನ್ನು ಕಂಡು ಪರಾರಿಯಾಗಲು ಯತ್ನಿಸಿದ ಲಾರಿಯನ್ನು ಬೆನ್ನಟಿದ ನೆಲ್ಯಾಡಿ ಪೋಲೀಸರು ಕೋಲ್ಪೆ ಎಂಬಲ್ಲಿ ವಾಹನವನ್ನು ಅಡ್ಡಗಟ್ಟಿ ಹಿಡಿಯುವಲ್ಲಿ ಯಶಸ್ಸಿಯಾಗಿದ್ದಾರೆ. ಈ ಬಗ್ಗೆ ನೆಲ್ಯಾಡಿ ಹೊರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply

Your email address will not be published. Required fields are marked *