
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸಂಘಟನೆಯಾದ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ 11ನೇ ವರ್ಷದ ಮುಂಡಾಲ ಸಮ್ಮಿಲನ ಕಾರ್ಯಕ್ರಮವು ಡಿ.27ರಂದು ಸಂಜೆ 4 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಅಧ್ಯಕ್ಷ ವಿನಯನೇತ್ರ ದಡ್ಡಲ್ಕಾಡ್ ಹೇಳಿದ್ರು. ಅವರು ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮುಂಡಾಲ ಸಮ್ಮಿಲನ ಕಾರ್ಯಕ್ರಮದಲ್ಲಿ 2019-20ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮುಂಡಾಲ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮುಂಡಾಲ ಸಮುದಾಯದ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ, 2021ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ನಡೆಯಲಿದೆ ಎಂದ್ರು. ಈ ವೇಳೆ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ನಿಶಾಂತ್ ಉರ್ವ, ಕೋಶಾಧಿಕಾರಿ ರಘುರಾಜ್ ಕದ್ರಿ, ಸಾಂಸ್ಕøತಿಕ ಕಾರ್ಯದರ್ಶಿ ಅಕ್ಷಯ್ ಕುಳಾಯಿ, ಕ್ರೀಡಾ ಕಾರ್ಯದರ್ಶಿ ಪ್ರಕಾಶ್ ಕೋಡಿಕರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.