Header Ads
Breaking News

ಅತ್ರಾಸ್‍ನಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ; ಮಂಗಳೂರಿನ ಲೇಡಿಹಿಲ್ ವೃತ್ತದ ಬಳಿ ಪ್ರತಿಭಟನೆ

ಉತ್ತರ ಪ್ರದೇಶದ ಹತ್ರಸ್‍ನಲ್ಲಿ ನಡೆದ ಮಹಿಳೆಯ ಅತ್ಯಾಚಾರ, ಕೊಲೆ ಹಾಗೂ ದೇಶದ ವಿವಿಧ ಕಡೆ ಮಹಿಳೆಯರ ಮೇಲೆ ನಡೆಯುತ್ತಿರುವ ಹಿಂಸೆ ದೌರ್ಜನ್ಯಗಳ ವಿರುದ್ಧ ನಗರದ ಲೇಡಿ ಹಿಲ್ ವೃತ್ತದ ಬಳಿ ಸಮಾನ ಮನಸ್ಕರ ಸಂಘಟನೆಯ ವತಿಯಿಂದ ಮೊಂಬತ್ತಿ ಉರಿಸಿ ಪ್ರತಿಭಟನಾ ಪ್ರದರ್ಶನ ನಡೆಯಿತು.

ಪ್ರತಿಭಟನಾ ಸಭೆಯ ಸಂಘಟಕರಾದ ಸಾಮಾಜಿಕ ಕಾರ್ಯಕರ್ತೆ ವಿದ್ಯಾದಿನಕರ್ ಅವರು ಮಾತನಾಡಿ, ದೇಶದ ವಿವಿಧ ಕಡೆಗಳಲ್ಲಿ ಮಹಿಳೆಯರು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರು ವುದು ಅಪಾಯಕಾರಿ ಬೆಳವಣಿಗೆಯಾಗಿದೆ.ಈ ರೀತಿಯ ಮಹಿಳೆಯರ ಮೇಲಾಗುತ್ತಿರುವ ಹಿಂಸೆ, ದೌರ್ಜನ್ಯ ವನ್ನು ಖಂಡಿಸಿ ನ್ಯಾಯ ಒದಗಿಸಲು ಆಗ್ರಹಿಸಿ ಈ ಸಾಂಕೇತಿಕ ಪ್ರತಿಭಟನಾ ಪ್ರದರ್ಶನದ ನಡೆಸುತ್ತಿರುವುದಾಗಿ ಹೇಳಿದರು.

ಪ್ರತಿಭಟನಾ ಪ್ರದರ್ಶನ ದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *