
ಕಾರ್ಕಳ: ಕಾರ್ಯಕರ್ತರು ಪಕ್ಷದ ಮೇಲೆ ಇಟ್ಟಿರುವ ನಿಷ್ಠೆ ಹಾಗೂ ಹಗಲಿರುಳು ದುಡಿದ ಪರಿಶ್ರಮದಿಂದಾಗಿ ಕಾರ್ಕಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಸ್ವಷ್ಟ ಬಹುಮತದೊಂದಿಗೆ ಗೆಲುವನ್ನು ಸಾಧಿಸಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಿಗಾಗಿ ಯಾವುದೇ ಲಾಬಿ ನಡೆಸುವುದಕ್ಕೆ ಅವಕಾಶ ಇರುವುದಿಲ್ಲ. ಲಾಭಿಗೆ ಪ್ರಯತ್ನಿಸಿದವರಿಗೆ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ಸಿಗದು ಅವರ ರಾಜಕೀಯ ಭವಿಷ್ಯ ಡೋಲಾಯಮಾನವಾಗಲಿದೆ ಎಂದು ಶಾಸಕ ಹಾಗೂ ಸರಕಾರದ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ನಗರದ ಮಂಜುನಾಥ ಪೈ ಸಭಾಂಗಣದಲ್ಲಿ ಬಿಜೆಪಿ ವಿಧಾನಸಭಾ ಕ್ಷೇತ್ರದ ಸಮಿತಿ ಆಯೋಜಿಸಿದ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಸಿ ಸಿ ಪಾಟೀಲ್ ಮಾತನಾಡಿ, ಮರಳುಗಾರಿಕೆ ಸಮಸ್ಸೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಅವೀಬಜಿತ ದಕ್ಷಿಣ ಕನ್ನಡದಲ್ಲಿ ಕರಾವಳಿ ಜಿಲ್ಲೆಗಳ ಜಿಲ್ಲಾಧಿಕಾರಿ, ಅಧಿಕಾರಿಗಳು, ಸಂಸದರು, ಶಾಸಕರ ಉಪಸ್ಥಿತಿಯಲ್ಲಿ ಸಮಾಲೋಚನಾ ಸಭೆಯನ್ನು ಆಯೋಜಿಸುವುದಕೆಕ ಬದ್ಧನಾಗಿದ್ದೇನೆ. ಹಲವು ವರ್ಷಗಳಿಂದ ಎಡೆಬಿಡದೇ ಕಾಡುತ್ತಿದ್ದ ಆ ಸಮಸ್ಸೆಳಿಗೆ ಮುಕ್ತಿದೊರೆಯುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಶಾಸಕ ರಘುಪತಿ ಭಟ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ ನಾಯಕ್, ಬೋಳ ಪ್ರಭಾಕರ ಕಾಮತ್, ಎಂ.ಕೆ.ವಿಜಯಕುಮಾರ್, ರೇಷ್ಮಾ ಶೆಟ್ಟಿ, ವಿಖ್ಯಾತ್ ಶೆಟ್ಟಿ, ಬೋಳ ಜಯರಾಮ ಸಲ್ಯಾನ್ ಉಪಸ್ಥಿತರಿದ್ದರು.