Header Ads
Header Ads
Header Ads
Header Ads
Header Ads
Header Ads
Breaking News

ಅಳಿಯೂರಿನಲ್ಲಿ ಪೊಲೀಸ್ ಕೆಡೆಟ್(ಎಸ್‌ಪಿಸಿ) ಘಟಕ ಉದ್ಘಾಟನೆ

ಮೂಡುಬಿದಿರೆ: ವಿದ್ಯಾರ್ಥಿಗಳು ಒಳ್ಳೆಯ ಮನುಷ್ಯರಾಗಿ ಬದುಕಲು ಶಿಕ್ಷಣ ಬೇಕು. ಇಂದು ಅನೇಕ ವಿದ್ಯಾರ್ಥಿಗಳು ಡ್ರಗ್ಸ್, ಧೂಮಪಾನದಂತಹ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಅಮೂಲ್ಯ ಜೀವನವನ್ನು ತಾವೇ ಹಾಳುಮಾಡಿಕೊಳ್ಳುತ್ತಿದ್ದಾರೆ. ಇಂತಹ ದುಶ್ಚಟಗಳಿಗೆ ವಿದ್ಯಾರ್ಥಿಗಳು ಬಲಿಯಾಗದೆ ತಮ್ಮ ಜೀವನದಲ್ಲಿ ಶಿಸ್ತು, ಸಂಯಮ, ನಾಯಕತ್ವದ ಗುಣವನ್ನು ಬೆಳೆಸಿಕೊಂಡು ಸತ್‌ಪ್ರಜೆಗಳಾಗಿ ಮೂಡಿಬರಬೇಕೆನ್ನುವ ನಿಟ್ಟಿನಲ್ಲಿ ಮಕ್ಕಳಿಗೆ ತರಗತಿಯೊಳಗಿನ ಜ್ಞಾನದ ಜೊತೆಗೆ ಅರಿವು ಮೂಡಿಸುವಂತಹ ಕಾರ್ಯಗಳು ಅವಶ್ಯಕ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಅಳಿಯೂರು ಸರಕಾರಿ ಹೈಸ್ಕೂಲ್‌ನಲ್ಲಿ ವಿದ್ಯಾರ್ಥಿ ಪೊಲೀಸ್ ಕೆಡೆಟ್(ಎಸ್‌ಪಿಸಿ) ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಕನಸಿನ ಯೋಜನೆ ಇದಾಗಿದ್ದು ಕರ್ನಾಟಕ ಸೇರಿದಂತೆ ದೇಶದ 5 ರಾಜ್ಯಗಳಲ್ಲಿ ಈ ಯೋಜನೆ ಅನುಷ್ಠಾನಗೊಂಡಿದೆ. ಮೂಡುಬಿದಿರೆ ತಾಲ್ಲೂಕಿನಲ್ಲಿ ಅಳಿಯೂರು ಹೈಸ್ಕೂಲ್‌ನ್ನು ಆಯ್ಕೆ ಮಾಡಲಾಗಿದೆ ಎಂದರು. ಕೆಎಸ್‌ಆರ್‌ಪಿಸಿ ಮಂಗಳೂರು ಇಲ್ಲಿನ ತರಬೇತುದಾರ ಕುಮಾರ್ ಘಟಕದ ಧೇಯೋದ್ಧೇಶವನ್ನು ವಿವರಿಸಿದ ಅವರು ಎಸ್‌ಪಿಸಿ ಘಟಕಕ್ಕೆ ಎಂಟನೇ ತರಗತಿಯ ೨೨ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಲಾಗಿದ್ದು ಅವರಿಗೆ ತರಬೇತಿಯನ್ನು ನೀಡಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಸದಸ್ಯೆ ಕೆ.ಪಿ. ಸುಜಾತ, ವಾಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ, ಉಪಾಧ್ಯಕ್ಷ ಅರುಣ್ ಶೆಟ್ಟಿ, ಸದಸ್ಯ ಲಕ್ಷ್ಮಣ ಸುವರ್ಣ, ಮೂಡುಬಿದಿರೆ ಪೊಲೀಸ್‌ಠಾಣೆಯ ಎಸ್.ಐ ದೇಜಪ್ಪ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *