Header Ads
Breaking News

ಅಸೈಗೋಳಿ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ; 5.93ಕೋಟಿ ರೂ. ಅನುದಾನದಲ್ಲಿ ನಿರ್ಮಾಣ

ಶೈಕ್ಷಣಿಕವಾಗಿ ಉನ್ನತ ಸಾಧನೆಗೈಯಬೇಕು ಎಂಬ ಕನಸು ಹೊತ್ತು ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿನಿಯರು ಶಿಕ್ಷಣಕ್ಕಾಗಿ ದೂರದ ಊರುಗಳಿಂದ ಬಂದು ಸಂಕಷ್ಟಕ್ಕೀಡಾಗುವ ಬಹಳಷ್ಟು ಘಟನೆಗಳು ನಮ್ಮ ಮುಂದೆ ಇದ್ದು ಅಂತಹವರಿಗೆ ಅಸೈಗೋಳಿಯಲ್ಲಿ ನಿರ್ಮಾಣವಾಗಲಿರುವ ವಿದ್ಯಾರ್ಥಿನಿ ನಿಲಯ ಮನೆಯ ವಾತಾವರಣ ನೀಡಲಿದ್ದು ವರ್ಷಕ್ಕೆ ನೂರು ವಿದ್ಯಾರ್ಥಿನಿಯರಿಗೆ ಶಿಕ್ಪಣ ಪಡೆಯಲು ಅನುದಾನ ಸಿಗಲಿದೆ ಎಂದು ಶಾಸಕ ಯು.ಟಿ. ಖಾದರ್ ಅಭಿಪ್ರಾಯಪಟ್ಟರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 5.93ಕೋಟಿ ರೂ. ಅನುದಾನದಲ್ಲಿ ಕೊಣಾಜೆ ಗ್ರಾಮದ ಅಸೈಗೋಳಿ ದಡಸ್‍ನಲ್ಲಿ ನಿರ್ಮಾಣ ಆಗಲಿರುವ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯ ಕಟ್ಟಡಕ್ಕೆ ಶಿಲಾನ್ಯಾಸಗೈದು ಅವರು ಮಾತನಾಡಿದರು.  ತೊಕ್ಕೊಟ್ಟಿನಿಂದ ರಸ್ತೆ ಅಗಲೀಕರಣಕ್ಕೆ ರಾಜ್ಯ ಸರ್ಕಾರದ 35ಕೋಟಿ ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ. ಮುಂದಕ್ಕೆ ದೇರಳಕಟ್ಟೆಯಿಂದ ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು ಮಾ. 25ರಂದು ಬಹು ನಿರೀಕ್ಷೆಯ ಬೃಹತ್ ಯೋಜನೆಯಾಗಿರುವ ಹರೇಕಳ ಅಡ್ಯಾರ್ ಮೇಲ್ಸೇತುವೆ ಹಾಗೂ ಡ್ಯಾಂಗೆ ಶಿಲಾನ್ಯಾಸ ನಡೆಯಲಿದೆ ಎಂದರು.

ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಝರ್ ಷಾ ಪಟ್ಟೋರಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು, ಸದಸ್ಯೆ ಪದ್ಮಾವತಿ ಪೂಜಾರಿ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ, ಸಂಘಟನಾ ಕಾರ್ಯದರ್ಶಿ ಸಲೀಂ ಮೇಗಾ, ಸದಸ್ಯರುಗಳಾದ ಪ್ರೇಮ್ ಪೂಜಾರಿ, ಶೋಭಾ, ಚಂಚಲಾಕ್ಷಿ, ಗೋಪಿಕಾ, ಎಪಿಎಂಸಿ ಮಾಜಿ ಉಪಾಧ್ಯಕ್ಷೆ ಮುತ್ತು ಶೆಟ್ಟಿ, ಸಿ.ಎಂ.ಮಹಮ್ಮದ್, ಮುಖಂಡರಾದ ಕಾಂಗ್ರೆಸ್ ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷ ಎನ್.ಎಸ್.ಕರೀಂ, ಕೊಣಾಜೆ ಗ್ರಾಮ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಗಟ್ಟಿ ಹಾಗೂ ಶ್ರೀನಿವಾಸ ಶೆಟ್ಟಿ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಹ್ಮಾನ್ ಕೋಡಿಜಾಲ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *