Header Ads
Header Ads
Header Ads
Breaking News

ಅ.16ರಂದು ಮುದ್ರಾ ಯೋಜನೆ ವಿಶೇಷ ಅಭಿಯಾನ ಮಂಗಳೂರಿನ ಪುರಭವನದಲ್ಲಿ ಅಭಿಯಾನ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ

ಪ್ರಧಾನ ಮಂತ್ರಿಯವರ ಮುದ್ರಾ ಯೋಜನೆಯು ಸಣ್ಣ, ಉದ್ದಿಮೆಗಳಿಗೆ ಆರ್ಥಿಕ ಸಹಾಯ ಮತ್ತು ಸ್ವ ಉದ್ಯೋಗ ಕಲ್ಪಿಸುವ ಉದ್ದೇಶವನ್ನು ಹೊಂದಿದ್ದು, ಇದರ ಕುರಿತು ಅರಿವನ್ನು ಮೂಡಿಸಲು ಮಂಗಳೂರಿನ ಪುರಭವನದಲ್ಲಿ ಅ.16 ರಂದು ಮುದ್ರಾ ಪ್ರಚಾರ ಅಭಿಯಾನ ನಡೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ರು.

ಈಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವ್ರು, ಕೇಂದ್ರ ಸರ್ಕಾರದ ಈ ಯೋಜನೆಯು ಅತ್ಯಂತ ಮಹತ್ವಪೂರ್ಣ ಯೋಜನೆಯಾಗಿದ್ದು, ಇದರ ಕುರಿತು ಜನಸಾಮಾನ್ಯರಿಗೂ ಅರಿವನ್ನು ಮೂಡಿಸಬೇಕಾದ ಅಗತ್ಯವಿದೆ ಎಂದು ಅವ್ರು ಹೇಳಿದ್ರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್.ಆರ್.ಉಮೇಶ್ , ಲೀಡ್ ಬ್ಯಾಂಕ್ ಜಿಲ್ಲಾ ಮುಖ್ಯ ವ್ಯವಸ್ಥಾಪಕ ರಾಘವ.ವಿ. ಯಜಮಾನ್ಯ ಮತ್ತಿತರು ಉಪಸ್ಥತಿರಿದ್ರು.

Related posts

Leave a Reply