

ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತು ಬಂಟ್ವಾಳದ ಆರೋಗ್ಯಾಧಿಕಾರಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳದ ಆರೋಗ್ಯಾಧಿಕಾರಿ ರವಿಕೃಷ್ಣ ಆತ್ಮಹತ್ಯೆಗೆ ಯತ್ನಿಸಿದವರು.ಆರೋಗ್ಯಾಧಿಕಾರಿ ರವಿಕೃಷ್ಣ ಎಂಬವರು ಕಳೆದ ಐದು ತಿಂಗಳ ಹಿಂದೆ ಸುಳ್ಯದಿಂದ ಬಂಟ್ವಾಳಕ್ಕೆ ವರ್ಗಾವಣೆಯಾಗಿದ್ದರು. ಅನಗತ್ಯವಾಗಿ ಇಬ್ಬರು ನನಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಇಲ್ಲಸಲ್ಲದ ಆರೋಪಗಳ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್ನೋಟ್ ಬರೆದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಡೆತ್ನೋಟ್ನಲ್ಲಿ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಹಾಗೂ ಸಿಬ್ಬಂದಿ ಇಕ್ಬಾಲ್ ಎಂಬವರ ಮೇಲೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ರವಿಕೃಷ್ಣ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಕಿತ್ಸೆ ಪಡೆಯುತ್ತಿದ್ದಾರೆ.