Header Ads
Breaking News

ಜೂ.21, 22ರಂದು ಮೂಡುಬಿದರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗ ಮೇಳ

ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗ ಮೇಳವು ಜೂನ್ 21 ಮತ್ತು 22ರಂದು ಮೂಡುಬಿದರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದ್ದು, ಮೇಳದಲ್ಲಿ ಪ್ರಮುಖ ವಲಯಗಳಲ್ಲಿ ಸುವರ್ಣವಕಾಶಗಳು ಸಿಗಲಿವೆ ಎಂದು ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೆಜಿಂಗ್ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದರು.

ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಆಳ್ವಾಸ್ ಪ್ರಗತಿ -2019ರ ಹನ್ನೊಂದನೇ ಆವೃತ್ತಿಯಲ್ಲಿ ಐಟಿ, ಐಟಿಎಸ್, ಮ್ಯಾನುಫ್ಯಾಕ್ಚರಿಂಗ್, ಹೆಲ್ತ್‍ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಬ್ಯಾಂಕಿಂಗ್ ಮತ್ತು ಹಣಕಾಸು, ಹಾಸ್ಪಿಟಾಲಿಟಿ, ಶಿಕ್ಷಣ ಮತ್ತು ಎನ್‍ಜಿಒಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ನೇಮಕಾತಿ ನಡೆಸಲಿವೆ. ಈ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಆರ್ಟ್ಸ್, ಕಾಮರ್ಸ್ ಹಾಗೂ ಮ್ಯಾನೇಜ್‍ಮೆಂಟ್, ಬೇಸಿಕ್ ಸಯನ್ಸ್, ನರ್ಸಿಂಗ್, ಐಟಿಐ, ಡಿಪೆÇ್ಲಮಾ, ಪಿಯುಸಿ ಮತ್ತು ಎಸೆಸೆಲ್ಸಿ ಮತ್ತು ಇತರ ವಿದ್ಯಾರ್ಹತೆಗಳುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ.

ಪ್ರತಿಷ್ಠಿತ ಮಲ್ಟಿನ್ಯಾಷನಲ್ ಕಂಪೆನಿ ಹಾಗೂ ನಾಡಿನ ಪ್ರಮುಖ ಬ್ಯಾಂಕ್‍ಗಳಲ್ಲಿ ಎಂ.ಬಿ.ಎ. ಮತ್ತು ಎಂ.ಕಾಂ ಪದವೀಧರರಿಗೆ ಕ್ರಮವಾಗಿ 300 ಹಾಗೂ 100 ಉದ್ಯೋಗಾವಕಾಶಗಳಿವೆ. ಮಂಗಳೂರು, ಉಡುಪಿ, ಬೆಂಗಳೂರು ಹಾಗೂ ಮೈಸೂರು ಭಾಗದ ಸ್ಟಾರ್ಟಅಪ್ ಕಂಪೆನಿಗಳು ಯುವ ಸಮುದಾಯಕ್ಕೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಉತ್ತಮ ಅವಕಾಶವನ್ನು ನೀಡಲಿವೆ ಎಂದ ಅವರು ಆಳ್ವಾಸ್ ಪ್ರಗತಿ- 2019ರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ www.alvaspragati.com ವೆಬ್‍ಸೈಟ್‍ನ್ನು ಲಾಗಿನ್ ಆಗಬಹುದು. ಐಟಿಐ, ಪಿಯುಸಿ, ಎಸೆಸೆಲ್ಸಿ ಹಾಗೂ ಇನ್ನೂ ಕಡಿಮೆ ವಿದ್ಯಾಭ್ಯಾಸದ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಆನ್‍ಲೈನ್ ನೋಂದಣಿ ಕಡ್ಡಾಯವಾಗಿರುತ್ತದೆ. ನೋಂದಣಿ ಪ್ರಕ್ರಿಯೆಯು ಮುಕ್ತವಾಗಿದ್ದು, ಜೂ.21 ಹಾಗೂ 22ರಂದು ನೋಂದಣಿ ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಸುಶಾಂತ್ ಅನಿಲ್ ಲೋಬೋ, ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಶ್ರೀನಿವಾಸ ಪೆಜತ್ತಾಯ, ಮಾಧ್ಯಮ ಸಂಯೋಜಕರಾದ ಪ್ರಸಾದ್ ಶೆಟ್ಟಿ ಮತ್ತಿರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *