Header Ads
Breaking News

ಆಶಾಕಾರ್ಯಕರ್ತೆಗೆ ಹಿಡಿಸೂಡಿ ಹಿಡಿದು ಅವ್ಯಾಚ್ಚ ಶಬ್ದಗಳಿಂದ ಬೈದು ನಿಂದನೆ

ಬಂಟ್ವಾಳ: ಕೊರೊನಾ ಲಾಕ್‍ಡೌನ್ ಅವಧಿಯಲ್ಲಿ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿಯ ಮನೆಯೊಂದರಲ್ಲಿ ಜನ ಸೇರಿಸಿ ವಾಮಾಚಾರ ನಡೆಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಾಹಿತಿ ಪಡೆಯಲು ಮನೆಗೆ ಹೋದ ಆಶಾಕಾರ್ಯಕರ್ತೆಗೆ ಅವ್ಯಾಚ್ಚ ಶಬ್ದಗಳಿಂದ ಬೈದು ಓಡಿಸಿದ ಘಟನೆ ಬೆಳಕಿಗೆ ಬಂದಿದೆ.

ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಅಬ್ಯಾಂತ್ ಎಂಬಲ್ಲಿನ ಮನೆಯೊಂದರಲ್ಲಿ ಕಳೆದ ಒಂದು ತಿಂಗಳಿನಿಂದ ಪ್ರತಿ ದಿನ ಜನ ಸೇರುತ್ತಿದ್ದಾರೆ ಎಂಬ ದೂರು ಸ್ಥಳೀಯ ಆಶಾ ಕಾರ್ಯಕರ್ತೆಯರಿಗೆ ಬಂದಿತ್ತು. ದೂರು ಬಂದ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆ ಮನೆಗೆ ಭೇಟಿ ನೀಡಿದ ಮಾಹಿತಿ ಪಡೆಯುತ್ತಿದ್ದಂತೆ ಮನೆಯ ಮಾಲಕಿ ಹಿಡಿಸೂಡಿ ಹಿಡಿದು ಅವ್ಯಾಚ್ಚ ಶಬ್ದಗಳಿಂದ ಬೈದು ಓಡಿಸಿದ್ದಾರೆ.
ಜೊತೆಗೆ ಬಂದಿದ್ದ ಸ್ಥಳೀಯ ಗ್ರಾ.ಪಂ.ಸದಸ್ಯರು ಗಳಿಗೂ ನ ಅವ್ಯಾಚ್ಚ ಶಬ್ದಗಳಿಂದ ನಿಂದಿಸಿದ್ದಾರೆ. ಈ ಮನೆಯಲ್ಲಿ ವಾಮಾಚಾರದ ಕಾರ್ಯಗಳು ದಿನ ನಡೆಯುತ್ತಿರುತ್ತವೆ ಎಂಬ ದೂರುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಈ ಬಗ್ಗೆ ಆಶಾಕಾರ್ಯಕರ್ತೆಯರು ಹಾಗೂ ಸ್ಥಳೀಯ ಗ್ರಾ.ಪಂ.ಸದಸ್ಯರ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ರು ಸ್ಥಳಕ್ಕೆ ಭೇಟಿ ನೀಡಿ ಮನೆಯ ಮಾಲೀಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

Leave a Reply

Your email address will not be published. Required fields are marked *