Header Ads
Header Ads
Breaking News

ಆ. 24ರಂದು ಇಸ್ಕಾನ್ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ

ಅಂತರರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘದ ವತಿಯಿಂದ ಆಗಸ್ಟ್ 24ರಂದು ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಕೃಷ್ಣವೇಷ, ಬಣ್ಣ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಇಸ್ಕಾನ್‍ನ ಕಾರ್ಯದರ್ಶಿ ಸನಂದನ ದಾಸ ತಿಳಿಸಿದರು.ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 24ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ಪ್ರಾರಂಭಗೊಂಡು ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಅದೇ ದಿನ ಸಂಜೆ ಇಸ್ಕಾನ್ ಸಂಸ್ಥೆಯ ವತಿಯಿಂದ ಬಂಟ್ಸ್ ಹಾಸ್ಟೆಲ್‍ನ ರಾಮಕೃಷ್ಣ ಶಾಲೆಯಲ್ಲಿ ನಡೆಸಲಾದ ಮಕ್ಕಳ ಅಂತರ ಶಾಲಾ ಮಟ್ಟದ ವಿವಿಧ ಸಾಂಸ್ಕøತಿಕ ಸ್ಪರ್ಧೆ ಹೆರಿಟೇಜ್ ಫೆಸ್ಟ್‍ನ ಬಹುಮಾನ ವಿತರಣಾ ಕಾರ್ಯಕ್ರಮವೂ ನಡೆಯಲಿದೆ. ಶಾಲಾ ಮಕ್ಕಳಿಗಾಗಿ ಗೀತಾ ಶ್ಲೋಕ ಪಠಣ, ಶಾಸ್ತ್ರೀಯ ನೃತ್ಯ, ಜನಪದ ನೃತ್ಯ ಪ್ರಾಸಗಳು, ಕಥೆ ಹೇಳುವುದು, ಗಾಯನ ಸ್ಪರ್ಧೆ ಪ್ರಬಂಧ ಸ್ಪರ್ಧೆ ಮೊದಲಾದ ಸ್ಪರ್ಧೆಗಳು ನಡೆಯಲಿದ್ದು 30 ಶಾಲೆಗಳಿಂದ ಸುಮಾರು 700 ಮಕ್ಕಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.ಈ ಸಂಧರ್ಭ ಸುದ್ದಿಗೋಷ್ಠಿಯಲ್ಲಿ ಶ್ವೇತ ದ್ವೀಪ ದಾಸ, ಬಾಲಕೃಷ್ಣ ರೈ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *