Header Ads
Breaking News

ಇಂದಿರಾ ಕ್ಯಾಂಟೀನ್ ಕೂಡ ಸ್ಥಗಿತ : ಮುಖ್ಯಮಂತ್ರಿ ಸಿಎಂ ಬಿಎಸ್‍ವೈ ಹೇಳಿಕೆ

ಕೊರೊನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್‍ಡೌನ್ ಇರುವುದರಿಂದ ಬಡವರಿಗೆ ಅನುಕೂಲವಾಗಲಿ ಎಂದು ಇಂದಿರಾ ಕ್ಯಾಂಟೀನ್‍ನಲ್ಲಿ ಊಟ, ತಿಂಡಿ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿತ್ತು. ಆದರೆ ಇದೀಗ ದಿಢೀರ್ ಆಗಿ ಇಂದಿರಾ ಕ್ಯಾಂಟೀನನ್ನು ತೆರೆಯದಿರುವುದಕ್ಕೆ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಈ ಕುರಿತಾಗಿ ಅಧಿಕೃತ ಹೇಳಿಕೆ ನೀಡಿದ್ದು, ನೂಕುನುಗ್ಗಲು ಆಗುವ ಕಾರಣಕ್ಕಾಗಿ ಇಂದಿರಾ ಕ್ಯಾಂಟೀನ್ ತೆರೆಯದೇ ಇರಲು ನಿರ್ಧರಿಸಲಾಗಿದೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್‍ವೈ, ಜನರು ಯುಗಾದಿ ಹಬ್ಬವನ್ನು ಮನೆಯಲ್ಲೇ ಆಚರಿಸಿ, ಆಡಂಬರದ ಹಬ್ಬ ಆಚರಣೆ ಮಾಡುವುದು ಬೇಡ ಎಂದು ಮನವಿ ಮಾಡಿಕೊಂಡರು. ಯುಗಾದಿ ಹಬ್ಬಕ್ಕಾಗಿ ವಸ್ತುಗಳನ್ನು ಖರೀದಿ ಮಾಡುವುದಕ್ಕಮಾರ್ಕೆಟ್‍ಗಳಿಗೆ ಹೋಗುವುದು ಬೇಡ ಎಂದು ವಿನಂತಿ ಮಾಡಿದ್ದಾರೆ.

Related posts

Leave a Reply

Your email address will not be published. Required fields are marked *