Header Ads
Breaking News

ಇಂದು ಚಂದ್ರಶೇಖರ್ ಆಜಾದ್ ಅವರ ಬಲಿದಾನ್ ದಿವಸ್ : ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ರಕ್ತದಾನ ಶಿಬಿರ

 ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಬಲಿದಾನ ದಿವಸ್ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು. ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರವನ್ನು ಶಾಸಕ ಕೆ ರಘುಪತಿಭಟ್ ಉದ್ಘಾಟಿಸಿದರು. ಇದೇ ಸಂದರ್ಬದಲ್ಲಿ ಚಂದ್ರಶೇಖರ್ ಆಜಾದ್ ಅವರ ಭಾವಚಿತ್ರಕ್ಕೆ ಪುಸ್ಪರ್ಚನೆ ಸಲ್ಲಿಸಲಾಯಿತು. ಬಿಜೆಪಿ ಕಾರ್ಯಕರ್ತರು ರಕ್ತದಾನ ಮಾಡಿದರು. ಸುಮಾರು ನೂರೈವತ್ತು ಯುನಿಟ್ ರಕ್ತದಾನದ ಗುರಿ ಹೊಂದಲಾಗಿದ್ದು ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ ಈ ರಕ್ತದಾನ ಶಿಬಿರ ನಡೆಯಿತು. ಶಾಸಕ ರಘುಪತಿಭಟ್ , ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಶ್ರೀಶ ನಾಯಕ್, ನಗರ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ದಾವೂದ್ ಅಬುಬಕ್ಕರ್, ಪಕ್ಷದ ವಿವಿಧ ಸ್ತರದ ನಾಯಕರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

Related posts

Leave a Reply

Your email address will not be published. Required fields are marked *