
ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತು ಗ್ರಹ ಬಳಕೆಯ ವಸ್ತುಗಳ ಬೆಲೆ ಏರಿಕೆಯ ವಿರುದ್ಧ ಜನಾಕ್ರೋಶ ಜಾಥಾ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡರು. ಮಂಗಳೂರಿನ ಕ್ಲಾಕ್ ಟವರ್ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಜಾಥಾ ನಡೆಯಿತು.
ಆನಂತರ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಅವರು, ಕೇಂದ್ರ ಸರಕಾರ ಬೆಲೆ ಏರಿಕೆ ಮೂಲಕ ಜನರ ಕಣ್ಣೀರಿಗೆ ಕಾರಣವಾಗಿದೆ. ಸರಕಾರದ ಉದ್ಯಮಗಳನ್ನು ಖಾಸಗೀಕರಣ ಗೊಳಿಸಿ ದೇಶ ತಲೆ ತಗ್ಗಿಸುವಂತೆ ಮಾಡಿದೆ. ಬಿಜೆಪಿಯ ಕೋಮುವಾದಿ ನೀತಿ, ಬೆಲೆ ಏರಿಕೆಯ ವಿರುದ್ಧ ವ್ಯಾಪಕ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಹೇಳಿದರು.
ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕ ಯು.ಟಿ. ಖಾದರ್,ಮಾಜಿ ಸಂಸದ ಬಿ.ಇಬ್ರಾಹಿಂ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಮೊಯ್ದಿನ್ ಬಾವ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಲೆಟ್ ಪಿಂಟೋ, ದ.ಕ.ಜಿಲ್ಲಾ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.