Header Ads
Header Ads
Breaking News

ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಆಟಿ ಮಾರಿಪೂಜೆ ಸಂಭ್ರಮ

ತುಳುನಾಡಿನಲ್ಲಿ ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಾದ ಹಳೆ ಮಾರಿಯಮ್ಮ ದೇವಸ್ಥಾನ, ಹೊಸ ಮಾರಿಯಮ್ಮ ದೇವಸ್ಥಾನ ಹಾಗೂ ಕಲ್ಯ ಮಾರಿಯಮ್ಮ ದೇವಸ್ಥಾನಗಳಲ್ಲಿ ಏಕಕಾಲದಲ್ಲಿ ತುಳುವರ ಆಟಿ ತಿಂಗಳ ಮಾರಿ ಪೂಜಾ ಮಹೋತ್ಸವ ವಿಜೃಂಭಣೆಯಿಂದ ಜರಗಿತು.

ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಮೂರನೇ ಮಾರಿಗುಡಿ ದೇವಸ್ಥಾನಗಳಿಗೆ ಕ್ರಮವಾಗಿ ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಮೆರವಣಿಗೆಯ ಮೂಲಕ ತರಲಾದ ಆಭರಣ ಮತ್ತು ಮಾರಿಯಮ್ಮ ದೇವಿಯ ಬಿಂಬವನ್ನು ಗದ್ದಿಗೆಯಲ್ಲಿ ಪ್ರತಿಷ್ಠಾಪಿಸಿದ ಬಳಿಕ ಆಟಿ ಮಾರಿಪೂಜೆಗೆ ಚಾಲನೆ ನೀಡಲಾಯಿತು.
ಗದ್ದಿಗೆಯೇ ಪ್ರಧಾನವಾಗಿರುವ ಕಾಪುವಿನ ಮಾರಿಯಮ್ಮನ ಸನ್ನಿಧಿಯಲ್ಲಿ ಗದ್ದಿಗೆಪೂಜೆ ಇಲ್ಲಿನ ವಿಶೇಷ ಸೇವೆಯಾಗಿದೆ. ಉಳಿದಂತೆ ಹೂವಿನ ಪೂಜೆ, ಕುಂಕುಮಾರ್ಚನೆ ಸೇವೆ ಹಾಗೂ ಹರಕೆಯ ರೂಪದಲ್ಲಿ ಕುರಿ, ಆಡು, ಕೋಳಿಗಳನ್ನು ಸಮರ್ಪಿಸಲಾಗುತ್ತೆ. ಈ ಹಿತಿಹಾಸ ಪ್ರಸಿದ್ಧ ಮಾರಿ ಪೂಜೆಗೆ ಊರ-ಪರವೂರ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಾರೆ

Related posts

Leave a Reply

Your email address will not be published. Required fields are marked *