Header Ads
Header Ads
Breaking News

ಈಗಾಗಲೇ ಮಂಗಳೂರು ಭರಪೂರ ಅಭಿವೃದ್ಧಿ ಕಂಡಿದೆ ಮುಂದಿನ ದಿನಗಳಲ್ಲಿ ಸಮಗ್ರ ಅಭಿವೃದ್ಧಿ ಕಾಣಲಿದೆ: ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಕ್ಷೇತ್ರದಲ್ಲಿ ಭರಪೂರ ಅಭಿವೃದ್ಧಿ ಆಗಿದ್ದು ಕ್ಷೇತ್ರ ವ್ಯಾಪಿ ಚತುಷ್ಪಥ ರಸ್ತೆಯಿಂದ ಗ್ರಾವೀಣ ಭಾಗವೂ ಈಗ ನಗರಕ್ಕೆ ಸಮನಾಗಿ ಅಲ್ಲದಿದ್ದರೂ ಮುಂದಿನ ದಿನಗಳಲ್ಲಿ ಸಮಗ್ರ ಅಭಿವೃದ್ಧಿ ಕಾಣಲಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದರು.ಮಂಗಳೂರು ವಿಧಾನ ಸಭಾ ಕ್ಷೇತ್ರದ ನರಿಂಗಾನ ಗ್ರಾಮ ಪಂಚಾಯಿತಿ ಕಚೇರಿ, ತೌಡುಗೋಳಿ ಕ್ರಾಸ್ನಿಂದ ಮುಡಿಪು ಜಂಕ್ಷನ್‌ವರೆಗೆ ನಡೆಯುವ ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು.ಮಂಗಳೂರು ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆದಿದೆ. ಜನಸಾಮಾನ್ಯರಿಗೆ ಉತ್ತಮ ರಸ್ತೆ ವ್ಯವಸ್ಥೆ ಮಾಡಿಕೊಡುವುದು ನನ್ನ ಪ್ರಮುಖ ಗುರಿ ಎಂದರು. ಈ ಸಂದರ್ಭ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ ಕಾಜವ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ಮಾಜಿ ಸದಸ್ಯ ಎನ್. ಎಸ್. ಕರೀಂ, ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *