Header Ads
Header Ads
Header Ads
Header Ads
Header Ads
Header Ads
Breaking News

ನೆಹರೂ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಗೆ ನಡೆದಿದೆ ಸಕಲ ಸಿದ್ಧತೆ

ರಾಜ್ಯದಲ್ಲಿ ಪ್ರಜೆಗಳಿಂದ ಆಯ್ಕೆಯಾದ ವಿಧಾನಸಭೆ ಅಸ್ತಿತ್ವದಲ್ಲಿದೆ. ಆದರೂ ಸಚಿವರಿಲ್ಲದೆ ಜಿಲ್ಲಾಧಿಕಾರಿಗಳೇ ರಾಜ್ಯದ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡುವ ಸಂದಿಗ್ಧ ಪರಿಸ್ಥಿತಿ ವಾತಾವರಣ ರಾಜ್ಯದಲ್ಲಿ ನಿರ್ಮಾಣಗೊಂಡಿದೆ. ಈ ನಡುವೆ ನೆರೆ ಹಾವಳಿಯಿಂದಾಗಿ ಸ್ವಾತಂತ್ರ್ಯ ದಿನಾಚರಣೆಯನ್ನ ಸರಳವಾಗಿ ಆಚರಿಸಲು ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರ, ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸುವಂತೆ ಸೂಚನೆ ನೀಡಿದೆ.

ರಾಜ್ಯದ ಬೆಂಗಳೂರು ಹೊರಪಡಿಸಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಉಪ ವಿಭಾಗಗಳಲ್ಲಿ ಉಪವಿಭಾಧಿಕಾರಿಗಳು ಮತ್ತು ತಾಲೂಕುಗಳಲ್ಲಿ ತಹಶೀಲ್ದಾರರು ಧ್ವಜಾರೋಹಣ ಮಾಡಲು ಸೂಚಿಸಲಾಗಿದೆ. ಇತ್ತ ಮಂಗಳೂರಿನ ನೆಹರೂ ಮೈದಾನದಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆದಿದೆ. ನಗರದೆಲ್ಲೆಡೆ ಭಾರೀ ಬಂದೋಬಸ್ತ್ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಈ ನಡುವೆ ಮಂಗಳೂರು ಮಹಾನಗರ ಪಾಲಿಕೆಯಲ್ಲೂ ಈ ಬಾರೀ ಮೇಯರ್ ಇಲ್ಲದೇ ಆಯುಕ್ತರೇ ಧ್ವಜಾರೋಹಣ ಮಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ.

Related posts

Leave a Reply

Your email address will not be published. Required fields are marked *