Header Ads
Breaking News

ಉಚ್ಚಿಲದಲ್ಲಿ ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ : ಓರ್ವನಿಗೆ ಗಂಭೀರ ಗಾಯ

ಪಡುಬಿದ್ರಿ : ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿ ಚಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲದಲ್ಲಿ ಸಂಭವಿಸಿದೆ.ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳೂರು ಕಡೆಯಿಂದ ಬಂದು ಉಚ್ಚಿಲ ಪಣಿಯೂರು ಕಡೆಗೆ ಉಚ್ಚಿಲ-ಪಣಿಯೂರು ಹೆದ್ದಾರಿ ಕ್ರಾಸ್ ಬಳಿ ಚಲಿಸುತ್ತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ತೀವೃತೆಗೆ ಅಮ್ನಿ ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕಾರುಗಳೆರಡು ನಜ್ಜುಗುಜ್ಜಾಗಿದೆ. ಗಾಯಗೊಂಡ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ.

Related posts

Leave a Reply

Your email address will not be published. Required fields are marked *