Header Ads
Breaking News

ಉಜಿರೆ : ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡಕ್ಕೆ ಶಿಲಾನ್ಯಾಸ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಉಜಿರೆಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 3 ಕೋಟಿ 35 ಲಕ್ಷ ಅನುದಾನದಲ್ಲಿ ಉಜಿರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜಾ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಶಿಲಾನ್ಯಾಸ ನೆರವೇರಸಿ ಮಾತನಾಡಿದ ಶಾಸಕರು, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಜಿರೆಯಲ್ಲಿ ವಸತಿ ನಿಲಯದ ಸಮಸ್ಯೆ ಇತ್ತು. ದೂರದಿಂದ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದೆ ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಲು ಈ ವಸತಿ ನಿಲಯಗಳು ಅನುಕೂಲವಾಗಬೇಕು ಎಂದು ಹೇಳಿದರು.

Related posts

Leave a Reply

Your email address will not be published. Required fields are marked *