Header Ads
Breaking News

ಉಜಿರೆ ಬಾಲಕ ಕಿಡ್ನಾಪ್ ಕೇಸ್ ಸುಖಾಂತ್ಯ : ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿಯ ಬಂಧನ

ಉಜಿರೆಯ ಉದ್ಯಮಿ ಬಿಜೊಯ್ ಅವರ ಪುತ್ರ, ಎಂಟರ ಹರೆಯದ ಬಾಲಕ ಅನುಭವ್‌ನನ್ನು ಕೋಲಾರದಲ್ಲಿ ಸುರಕ್ಷಿತವಾಗಿ ಪತ್ತೆ ಹಚ್ಚವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣಕಾರರನ್ನು ಮಗುವಿನೊಂದಿಗೆ ವಿಶೇಷ ತಂಡ ಪೊಲೀಸರು ಶನಿವಾರ ಬೆಳಗ್ಗೆ 5ರ ಹೊತ್ತಿಗೆ ಪತ್ತೆ ಹಚ್ಚಿದ್ದಾರೆ. ಆರೋಪಿಗಳನ್ನೂ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು ಕೋಲಾರದಿಂದ ವಿಶೇಷ ತನಿಖಾ ತಂಡ ಪ್ರಯಾಣ ಆರಂಭಿಸಿದೆ.

ಕೋಲಾರದ ಮಾಲೂರು ತಾಲೂಕಿನ ಕೂರ್ನ ಹೊಸಹಳ್ಳಿ ಮಂಜುನಾಥ್ ಎಂಬಾತನ ಮನೆಯಲ್ಲಿ ಮಗುವನ್ನು ಬಚ್ಚಿಡಲಾಗಿತ್ತು. ಆತನ ಮೊಬೈಲ್ ಅನ್ನು ಉಪಯೋಗಿಸಿ ಅಪಹರಣಕಾರರು ಕರೆ ಮಾಡಿದ್ದಾರೆ ಎನ್ನಲಾಗಿದ್ದು, ತಕ್ಷಣವೇ ಕಾರ್ಯ ಪ್ರವೃತ್ತರಾದ ಪೊಲೀಸರು ಈತನನ್ನು ವಶಕ್ಕೆ ಪಡೆದು ಅಪರಹಣವನ್ನ ಪತ್ತೆಹಚ್ಚಿದ್ದಾರೆ. ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ನೆರವಿಂದ ಮಂಗಳೂರಿನ ಪೊಲೀಸ್ ತಂಡ ಬಂಧನ ಕಾರ್ಯಾಚರಣೆ ನಡೆಸಿದೆ ಎಂದು ತಿಳಿದುಬಂದಿದೆ.ಊರಿನ ಜನರನ್ನು ಭಯಭೀತರನ್ನಾಗಿ ಮಾಡಿದ್ದ ಅಪಹರಣ ಪ್ರಕರಣದಲ್ಲಿ ಪೊಲೀಸರು 36 ಗಂಟೆಗಳಲ್ಲಿ ಯಶಸ್ವಿ ಕಾರ್ಯಾಚರಣೆಯ ಮೂಲಕ ಮಗುವನ್ನು ಯಾವುದೇ ಅಪಾಯವಿಲ್ಲದೆ ಪಾರು ಮಾಡಿ ಆರೋಪಿಗಳನ್ನು ಬಂಧಿಸಿರುವುದು ಜನರ ಮೆಚ್ಚುಗೆಗೆ ಕಾರಣವಾಗಿದೆ.

Related posts

Leave a Reply

Your email address will not be published. Required fields are marked *