Header Ads
Header Ads
Header Ads
Breaking News

ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ಜನ ವಿರೋಧಿ ಆರ್ಥಿಕ ನೀತಿ ವಿರುದ್ಧ ಪ್ರತಿಭಟನೆ

ಕೇಂದ್ರ ಸರಕಾರದ ಜನವಿರೋಧಿ ಆರ್ಥಿಕ ನೀತಿ ವಿರುದ್ಧ ಇವತ್ತು ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದ ಪ್ರತಿಭಟನಾಕಾರರು ಹುತಾತ್ಮ ಯೋಧರ ಸ್ಮಾರಕದೆದುರು ಪ್ರತಿಭಟನೆ ನಡೆಸಿದ್ರು. ಕೇಂದ್ರ ಸರಕಾರದ ಜನವಿರೋಧಿ ಆರ್ಥಿಕ ನೀತಿ, ನಿರುದ್ಯೋಗ ಸಮಸ್ಯೆ, ಉದ್ದಿಮೆಗಳ ಮುಚ್ಚುಗಡೆ, ಕೃಷಿ ಬಿಕ್ಕಟ್ಟು, ಬ್ಯಾಂಕ್ ವಂಚನೆ, ಕಪ್ಪುಹಣ ತರುವಲ್ಲಿನ ವೈಫಲ್ಯದ ವಿರುದ್ಧ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ರು. ಕೇಂದ್ರ ಸರಕಾರದ ಒಡೆತನದಲ್ಲಿರುವ ಸಂಸ್ಥೆಗಳನ್ನು ಖಾಸಗಿಯವರಿಗೆ ನೀಡುವುದರ ವಿರುದ್ಧವೂ ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತವಾಯಿತು.ಪ್ರತಿಭಟನೆ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರಕಾರದ ವಿರುದ್ಧ ಘೋ?ಣೆಗಳನ್ನು ಕೂಗಿದರು. ಬಿಜೆಪಿ ಜನವಿರೋಧಿ ಆಡಳಿತದ ವಿರುದ್ಧ ಜನರು ಒಗ್ಗಟ್ಟಾಗಬೇಕು.ಕಾಂಗ್ರೆಸ್ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಮತ್ತ? ಹೋರಾಟ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡರು ಹೇಳಿದರು.

Related posts

Leave a Reply

Your email address will not be published. Required fields are marked *