Header Ads
Breaking News

ಉಡುಪಿಯಲ್ಲಿ ವ್ಯಕ್ತಿಗೆ ಚೂರಿ ಇರಿತ : ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕ್ಷುಲ್ಲಕ ಕಾರಣಕ್ಕಾಗಿ ಯುವಕನೊರ್ವನನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮೀನಗರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.
ಲಕ್ಷ್ಮೀನಗರದ ಯೋಗೀಶ್ ಕೊಲೆಯಾದ ಯುವಕ. ವಕ್ವಾಡಿ ಪ್ರವೀಣ್ ಹತ್ಯೆಯ ಆರೋಪಿಗಳಾದ ಸುಜಿತ್ ಪಿಂಟೋ ಸಹಚರರಿಂದ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ ಯೋಗೀಶ್ ಮನೆ ಮುಂದೆ ಆರೋಪಿಗಳು ಮತ್ತು ಯೋಗೀಶ್ ನಡುವೆ ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದಿದೆ. ಗಲಾಟೆ ತಾರಕಕ್ಕೇರಿ ಆರೋಪಿಗಳು ಯೋಗೀಶ್ ನನ್ನು ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಉಡುಪಿ ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್, ಮಲ್ಪೆ ಎಸ್‌ಐ ತಿಮ್ಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

Leave a Reply

Your email address will not be published. Required fields are marked *